ಅಹಮದಾಬಾದ್: ಗುಜರಾತ್‌ನಿಂದ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಪ್ರಚಾರ ಪ್ರಾರಂಭಿಸಲು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಅಹಮದಾಬಾದ್ ತಲುಪಿದ್ದಾರೆ.
ಅಹಮದಾಬಾದ್‌ನಲ್ಲಿರುವ ಸಬರಮತಿ ಆಶ್ರಮ ಮತ್ತು ಗುಜರಾತ್ ಕಾಂಗ್ರೆಸ್‌ನ ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಕಚೇರಿಗೆ ಭೇಟಿ ನೀಡಲಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರನ್ನು ಗಾಂಧಿಯವರ ಅಭ್ಯರ್ಥಿ ಎಂದೂ ಕರೆಯಲಾಗುತ್ತಿದೆ. ಶಶಿ ತರೂರ್ ಕೂಡ ಅಧ್ಯಕ್ಷ ಸ್ಥಾನದ ಸ್ಪರ್ಧೆಯಲ್ಲಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೆಪ್ಟೆಂಬರ್ 30 ರಂದು ನಾಮಪತ್ರ ಸಲ್ಲಿಕೆ ಮುಕ್ತಾಯ ವಾಗಿದ್ದು, ಅಕ್ಟೋಬರ್ 19 ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ಗಾಂಧಿಗಳು ಉನ್ನತ ಹುದ್ದೆಗೆ ಸ್ಪರ್ಧಿಸದ ಕಾರಣ, ಪಕ್ಷವು 25 ವರ್ಷಗಳ ನಂತರ ಗಾಂಧಿಯೇತರ ಅಧ್ಯಕ್ಷರನ್ನು ಪಡೆಯಲು ಸಿದ್ಧವಾಗಿದೆ.
ಇನ್ನು, “ಪಕ್ಷವನ್ನು ಬಲಗೊಳಿಸಲು ಮತ್ತು ಭಾರತದ ಸಂವಿಧಾನವನ್ನು ಉಳಿಸಲು ನಾನು ಚುನಾವಣೆಗೆ ಸ್ಪರ್ಧಿಸಲು ಒಪ್ಪಿದ್ದೇನೆ, ಸ್ಪರ್ಧಿಸುತ್ತಿದ್ದೇನೆ. ಪಕ್ಷದ ಅಧ್ಯಕೀಯ ಚುನಾವಣೆಯಲ್ಲಿ ಗಾಂಧಿ ಕುಟುಂಬ ಸದಸ್ಯರು ತಟಸ್ಥವಾಗಿದ್ದಾರೆ.
Post a Comment