ಹಿಜಾಬ್ ವಿವಾದ ವಿಚಾರಣೆ ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ(CJI) ವರ್ಗಾವಣೆ ಆಗಿರುವುದನ್ನು ಸ್ವಾಗತಿಸುತ್ತೇವೆ. ಕೋರ್ಟ್ ಆದೇಶದಂತೆ ಅಲ್ಲಿಯವರೆಗೂ ಹೈಕೋರ್ಟ್ ಆದೇಶವನ್ನು ಶಿಕ್ಷಣ ಸಂಸ್ಥೆಗಳಲ್ಲಿ ಪಾಲಿಸುತ್ತೇವೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ಬೆಂಗಳೂರು: ಹಿಜಾಬ್ ವಿವಾದ ವಿಚಾರಣೆ ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ(CJI) ವರ್ಗಾವಣೆ ಆಗಿರುವುದನ್ನು ಸ್ವಾಗತಿಸುತ್ತೇವೆ. ಕೋರ್ಟ್ ಆದೇಶದಂತೆ ಅಲ್ಲಿಯವರೆಗೂ ಹೈಕೋರ್ಟ್ ಆದೇಶವನ್ನು ಶಿಕ್ಷಣ ಸಂಸ್ಥೆಗಳಲ್ಲಿ ಪಾಲಿಸುತ್ತೇವೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಸಿಜೆಐ ಪೀಠಕ್ಕೆ ಪ್ರಕರಣವನ್ನು ವರ್ಗಾಯಿಸಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು, ವಿಶ್ವಾದ್ಯಂತ ಇಂದು ಮಹಿಳೆಯರು ಹಿಜಾಬ್/ಬುರ್ಖಾ ಧರಿಸಬಾರದು ಎಂದು ಒತ್ತಾಯಿಸುತ್ತಿಸುತ್ತಿದ್ದಾರೆ. ಕರ್ನಾಟಕ ಸರ್ಕಾರ ಕೂಡ ಅದನ್ನು ಪ್ರೋತ್ಸಾಹಿಸುತ್ತದೆ. ಇಂದು ಸುಪ್ರೀಂ ಕೋರ್ಟ್ ನಿಂದ ಉತ್ತಮ ತೀರ್ಪು ನಿರೀಕ್ಷಿಸಿದ್ದೆವು. ಈ ಮಧ್ಯೆ ಕರ್ನಾಟಕ ಹೈಕೋರ್ಟ್ ಆದೇಶವು ಮಧ್ಯಂತರ ಸಮಯದಲ್ಲಿ ಅನ್ವಯಿಸುತ್ತದೆ, ಅಲ್ಲಿಯವರೆಗೂ ಶಾಲೆ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ನಿಯಮ ಮುಂದುವರಿಯುತ್ತದೆ, ಸುಪ್ರೀಂ ಕೋರ್ಟ್ ನಿಂದ ಏನೇ ತೀರ್ಪು ಬಂದರೂ ಸ್ವಾಗತಿಸುತ್ತೇವೆ ಎಂದರು.
ಇನ್ನು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಹಿಜಾಬ್ ವಿವಾದ ಪ್ರಕರಣವನ್ನು ಇಂದು ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ. ನಾವು ಸುಪ್ರೀಂ ಕೋರ್ಟ್ ತೀರ್ಪನ್ನು ಎದುರು ನೋಡುತ್ತಿದ್ದೇವೆ. ಅಲ್ಲಿಯವರೆಗೆ ಸೂಕ್ಷ್ಮ ಪ್ರದೇಶಗಳಲ್ಲಿ ಮುಂಜಾಗ್ರತೆ ಕ್ರಮ ಕೈಗೊಂಡಿದ್ದೇವೆ. ಸರ್ಕಾರ ಸಿಜೆಐ ಪೀಠದ ಮುಂದೆ ವಾದ ಮಂಡಿಸಲಿದೆ ಎಂದರು.
ಇನ್ನು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಪ್ರಮೋದ್ ಮುತಾಲಿಕ್, ಸುಪ್ರೀಂ ಕೋರ್ಟ್ ಏನೇ ತೀರ್ಪು ಕೊಟ್ಟರೂ ಸ್ವಾಗತಿಸಬೇಕು, ಏಕೆಂದರೆ ಈ ದೇಶ ಸಂವಿಧಾನದ ಮೇಲೆ ನಡೆಯುವುದೇ ಹೊರತು ಯಾವುದೋ ಧಾರ್ಮಿಕ ಆಚರಣೆಗಳು, ಪದ್ಧತಿಗಳ ಮೇಲೆ ನಡೆಯುವುದಲ್ಲ ಎಂದಿದ್ದಾರೆ.
إرسال تعليق