ತಮಿಳುನಾಡು ಮಾಜಿ ಸಿಎಂ ಜೆ.ಜಯಲಲಿತಾ ಸಾವು ಪ್ರಕರಣದಲ್ಲಿ ಶಶಿಕಲಾ ಹಾಗೂ ವೈದ್ಯಕೀಯ ಸಿಬ್ಬಂದಿ ತನಿಖೆಗೆ ನ್ಯಾ. ಆರ್ಮುಗಸ್ವಾಮಿ ವಿಚಾರಣಾ ಸಮಿತಿ ಆದೇಶಿಸಿದೆ.
ಜೆ. ಜಯಲಲಿತಾ
ಚೆನ್ನೈ: ತಮಿಳುನಾಡು ಮಾಜಿ ಸಿಎಂ ಜೆ.ಜಯಲಲಿತಾ ಸಾವು ಪ್ರಕರಣದಲ್ಲಿ ಶಶಿಕಲಾ ಹಾಗೂ ವೈದ್ಯಕೀಯ ಸಿಬ್ಬಂದಿ ತನಿಖೆಗೆ ನ್ಯಾ. ಆರ್ಮುಗಸ್ವಾಮಿ ವಿಚಾರಣಾ ಸಮಿತಿ ಆದೇಶಿಸಿದೆ.
ಇಂದು ಸಮಿತಿಯ ವರದಿ ಮಂಡನೆಯಾಗಿದ್ದು, ತಮಿಳುನಾಡು ವಿಧಾನಸಭೆಯಲ್ಲಿ ವರದಿಯನ್ನು ಮಂಡನೆ ಮಾಡಲಾಯಿತು.
ಪ್ರಕರಣದ ಸಂಬಂಧ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್, ಮಾಜಿ ಆರೋಗ್ಯ ಕಾರ್ಯದರ್ಶಿ ರಾಧಾಕೃಷ್ಣನ್, ವೈದ್ಯ ಶಿವಕುಮಾರ್, ಮಾಜಿ ಆರೋಗ್ಯ ಸಚಿವ ವಿಜಯಭಾಸ್ಕರ್ ವಿರುದ್ಧ ತನಿಖೆ ನಡೆಸಲು ಆದೇಶಿಸಲಾಗಿದೆ.
2016ರ ಡಿಸೆಂಬರ್ ನಲ್ಲಿ ಮುಖ್ಯಮಂತ್ರಿಯಾಗಿದ್ದ ಜಯಲಲಿತಾ ಆಸ್ಪತ್ರೆಯಲ್ಲಿ ದೀರ್ಘಾವಧಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಈ ಸಮಿತಿಯನ್ನು ರಚಿಸಿತ್ತು.
ಸಮಿತಿ ಉಲ್ಲೇಖಿಸಿರುವ ವ್ಯಕ್ತಿಗಳ ವಿರುದ್ಧ ವಿರುದ್ಧ ಸರ್ಕಾರಿ ತನಿಖೆ ಕುರಿತು ಕಾನೂನು ತಜ್ಞರ ಅಭಿಪ್ರಾಯವನ್ನು ತೆಗೆದುಕೊಂಡು ಸೂಕ್ತ ಕ್ರಮ ಕೈಗೊಳ್ಳಲು ಸಂಪುಟ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
"ಎಲ್ಲಾ ಅಂಶಗಳನ್ನೂ ಪರಿಶೀಲಿಸಿದ ನಂತರ ವಿಕೆ ಶಶಿಕಲಾ, ಕೆಎಸ್ ಶಿವಕುಮಾರ್, ಡಾ. ಸಿ ವಿಜಯ ಭಾಸ್ಕರ್, ಜೆ ರಾಧಾಕೃಷ್ಣನ್ ಅವರಿಂದ ತಪ್ಪಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಅವರ ವಿರುದ್ಧ ತನಿಖೆಗೆ ಆದೇಶಿಸಬೇಕೆಂಬ ನಿರ್ಧಾರಕ್ಕೆ ಸಮಿತಿ ಬಂದಿರುತ್ತದೆ" ಎಂದು ಸಮಿತಿ ತನ್ನ ವರದಿಯಲ್ಲಿ ತಿಳಿಸಿದೆ.
ಜಯಲಲಿತಾ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ಡಾ. ವೈವಿಸಿ ರೆಡ್ಡಿ ಹಾಗೂ ಡಾ. ವಾಬು ಅಬ್ರಾಹಮ್ ಅವರು ಅಪೋಲೋ ಆಸ್ಪತ್ರೆಯ ಸ್ವಂತ ವೈದ್ಯರನ್ನು ಹೊರತುಪಡಿಸಿ ಮುಂಬೈ, ಬ್ರಿಟನ್, ಅಮೇರಿಕಾಗಳಿಂದ ವೈದ್ಯರನು ಆಹ್ವಾನಿಸಿ ಆಂಜಿಯೋ/ ಶಸ್ತ್ರಚಿಕಿತ್ಸೆ ಬಗ್ಗೆ ಅವರ ಅಭಿಪ್ರಾಯ ಕೇಳುತ್ತಿದ್ದರು, ಒತ್ತಡಕ್ಕೆ ಒಳಗಾಗಿ ತಮ್ಮ ಉದ್ದೇಶವನ್ನು ಈಡೇರಿಸಿಕೊಳ್ಳಲು ಶಸ್ತ್ರಚಿಕಿತ್ಸೆಯನ್ನು ಮುಂದೂಡುವ ನೆಪದಲ್ಲಿ ಅಪಾಯದ ಕೆಲಸಕ್ಕೆ ಕೈಹಾಕಿದ್ದರು ಎಂಬ ಅರ್ಥ ಬರುವ ರೀತಿಯಲ್ಲಿ ಸಮಿತಿ ವರದಿ ವೈದ್ಯರ ಬಗ್ಗೆ ಉಲ್ಲೇಖಿಸಿದ್ದು, ಈ ಕಾರಣದಿಂದಾಗಿ ತನಿಖೆ ನಡೆಯಬೇಕೆಂದು ಆಯೋಗ ಹೇಳಿದೆ.
ಆಯೋಗ ಆಗಿನ ಮುಖ್ಯ ಕಾರ್ಯದರ್ಶಿ ರಾಮಮೋಹನ್ ರಾವ್ ವಿರುದ್ಧದ ಆರೋಪವನ್ನೂ ಪರಿಗಣಿಸಿದ್ದು, ಅವರ ವಿರುದ್ಧವೂ ತನಿಖೆ ನಡೆಯಬೇಕೆಂದು ಹೇಳಿದೆ.
إرسال تعليق