ಚರಂಡಿಗಳ ಮೇಲೆ ಕಟ್ಟಡ ನಿರ್ಮಾಣಕ್ಕೆ ಅನುಮತಿ ಕೊಟ್ಟವರು ಯಾರು: ಹೈಕೋರ್ಟ್ ಪ್ರಶ್ನೆ

 ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಸರ್ಜಾಪುರ ಹೋಬಳಿಯ ವಿವಿಧ ಬಡಾವಣೆಗಳಲ್ಲಿ ರಾಜಕಾಲುವೆಗೆ ಸಂಪರ್ಕ ಕಲ್ಪಿಸುವ ಚರಂಡಿ ನಿರ್ಮಾಣಕ್ಕೆ ಯಾರು ಹೊಣೆ ಎಂಬುದನ್ನು ಪತ್ತೆ ಹಚ್ಚಲು ಕರ್ನಾಟಕ ಹೈಕೋರ್ಟ್ ಉಪ ಪೊಲೀಸ್ ಆಯುಕ್ತರ ದರ್ಜೆಗಿಂತ ಕಡಿಮೆಯಿಲ್ಲದ ಅಧಿಕಾರಿಯಿಂದ ತನಿಖೆಗೆ ಆದೇಶಿಸಿದೆ.

                    ಹೈಕೋರ್ಟ್

By : Rekha.M
Online Desk

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಸರ್ಜಾಪುರ ಹೋಬಳಿಯ ವಿವಿಧ ಬಡಾವಣೆಗಳಲ್ಲಿ ರಾಜಕಾಲುವೆಗೆ ಸಂಪರ್ಕ ಕಲ್ಪಿಸುವ ಚರಂಡಿ ನಿರ್ಮಾಣಕ್ಕೆ ಯಾರು ಹೊಣೆ ಎಂಬುದನ್ನು ಪತ್ತೆ ಹಚ್ಚಲು ಕರ್ನಾಟಕ ಹೈಕೋರ್ಟ್ ಉಪ ಪೊಲೀಸ್ ಆಯುಕ್ತರ ದರ್ಜೆಗಿಂತ ಕಡಿಮೆಯಿಲ್ಲದ ಅಧಿಕಾರಿಯಿಂದ ತನಿಖೆಗೆ ಆದೇಶಿಸಿದೆ.

2016ರಲ್ಲಿ ಆನೇಕಲ್ ತಾಲೂಕಿನ ತಹಶೀಲ್ದಾರ್ ದೂರು ದಾಖಲಿಸಿರುವುದನ್ನು ಪ್ರಶ್ನಿಸಿ ಶಾಂತಿಪುರದ ರಾಮಸ್ವಾಮಿ ಮತ್ತು ಇತರ ಮೂವರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಈ ಆದೇಶ ನೀಡಿದರು. 

ಕೊಳಚೆ ನೀರು ರಾಜಕಾಲುವೆಗೆ ಬಿಡಲು ಅನುಮತಿ ನೀಡಿಲ್ಲ ಎಂದು ನ್ಯಾಯಾಲಯ ಹೇಳಿದೆ. ಇದರಿಂದ ಹೂಳು ತುಂಬಿಕೊಳ್ಳುವುದು ಮಾತ್ರವಲ್ಲದೆ ಜಲಾವೃತವಾಗಿ ಇನ್ನಷ್ಟು ಸಮಸ್ಯೆಗಳಾಗುತ್ತದೆ. BWSSB ಯಿಂದ ಸಾಕಷ್ಟು ಒಳಚರಂಡಿ ಸೌಲಭ್ಯಗಳನ್ನು ಒದಗಿಸದೆ ಯಾವುದೇ ಲೇಔಟ್‌ಗಳನ್ನು ಮಂಜೂರು ಮಾಡಲಾಗುವುದಿಲ್ಲ ಕೊಳಚೆನೀರನ್ನು ಸಂಸ್ಕರಿಸಲು ಸೂಕ್ತವಾದ ಒಳಚರಂಡಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಬೇಕಾಗಿತ್ತು. ಅಪಾರ್ಟ್‌ಮೆಂಟ್ ಕಾಂಪ್ಲೆಕ್ಸ್‌ಗಳಲ್ಲಿ ಎಸ್‌ಟಿಪಿ ಸ್ಥಾಪನೆಗೆ ಸಂಬಂಧಿಸಿದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶವು ವಸತಿ ಬಡಾವಣೆಗಳಿಗೂ ಅನ್ವಯಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಪಂಚಾಯತ್ ರಾಜ್ ಇಲಾಖೆ, ಬಿಬಿಎಂಪಿ, ಕಂದಾಯ ಇಲಾಖೆ, ಸರ್ವೆ ಸೆಟ್ಲ್‌ಮೆಂಟ್ ಕಚೇರಿ, ಕೆಎಸ್‌ಪಿಸಿಬಿ, ಕೆರೆ ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಎಲ್ಲಾ ಇಲಾಖೆಗಳು ತನಿಖೆಗೆ ಸಹಕರಿಸುವಂತೆ ಸೂಚಿಸಿದ ನ್ಯಾಯಾಲಯ, ಹೆಚ್ಚುವರಿ ಆರೋಪಪಟ್ಟಿಯನ್ನು ಮುಂದಿನ ವರ್ಷ ಜನವರಿ 2ರೊಳಗೆ  ಸಲ್ಲಿಸುವಂತೆ ಆದೇಶಿಸಿದೆ.

ಸ್ವಯಂ ಪ್ರೇರಿತ ಪಿಐಎಲ್
ಈ ಆರೋಪಗಳು ಬಹಳಷ್ಟು ಪರಿಣಾಮ ಬೀರುತ್ತಿದ್ದು, ಸಾರ್ವಜನಿಕ ಪ್ರಾಮುಖ್ಯತೆಯನ್ನು ಹೊಂದಿವೆ ಎಂದು ಪರಿಗಣಿಸಿದ ನ್ಯಾಯಾಲಯವು, ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳನ್ನು ಮತ್ತು ಸಂಬಂಧಿತ ಸರ್ಕಾರಿ ಸಂಸ್ಥೆಗಳಿಗೆ ನಿರ್ದೇಶನ ನೀಡಲು ಹಂಗಾಮಿ ಮುಖ್ಯ ನ್ಯಾಯಾಧೀಶರ ಮುಂದೆ ಪ್ರಕರಣ ವಿಚಾರಣೆ ನಡೆಸುವಂತೆ ರಿಜಿಸ್ಟ್ರಾರ್ ಜನರಲ್ ಅವರಿಗೆ ನಿರ್ದೇಶನ ನೀಡಿದೆ.


Post a Comment

أحدث أقدم