ಎಸ್ ಸಿ, ಎಸ್.ಟಿ ಮೀಸಲಾತಿ ಹೆಚ್ಚಳ: ಕಾನೂನು ಬಿಕ್ಕಟ್ಟಿನ ಬಗ್ಗೆ ಸರ್ಕಾರ ನಿಲುವು ಸ್ಪಷ್ಟಪಡಿಸಬೇಕು- ಸಿದ್ದರಾಮಯ್ಯ

 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಸರ್ಕಾರ ಈ ಸಮುದಾಯವನ್ನು ತಪ್ಪು ದಾರಿಗೆಳೆಯುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

               ಸಿದ್ದರಾಮಯ್ಯ

By :Rekha.M
Online Desk

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಸರ್ಕಾರ ಈ ಸಮುದಾಯವನ್ನು ತಪ್ಪು ದಾರಿಗೆಳೆಯುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸುಪ್ರೀಂಕೋರ್ಟ್ (ಇಂದಿರಾ ಸಹಾನಿ ಪ್ರಕರಣದ) ತೀರ್ಪಿನಲ್ಲಿ ಒಟ್ಟು ಮೀಸಲಾತಿ ಶೇ. 50 ಮೀರುವಂತಿಲ್ಲ. ಮೀಸಲು ಹೆಚ್ಚಳ ನಿರ್ಧಾರದಿಂದಾಗಿ ರಾಜ್ಯದ ಒಟ್ಟು ಮೀಸಲಾತಿ ಪ್ರಮಾಣ ಶೇ. 56 ಆಗಲಿದೆ. ಈ ಕಾನೂನು ಬಿಕ್ಕಟ್ಟಿನ ಬಗ್ಗೆ ರಾಜ್ಯ ಬಿಜೆಪಿ ಸರ್ಕಾರ ತನ್ನ ನಿಲುವು ಸ್ಪಷ್ಪಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಎಸ್.ಸಿ, ಎಸ್.ಟಿ ಮೀಸಲಾತಿ ಹೆಚ್ಚಳಕ್ಕಾಗಿ ರಾಜ್ಯ ವಿಧಾನಮಂಡಲ ನಿರ್ಣಯ ಕೈಗೊಂಡು ಸಂವಿಧಾನ ತಿದ್ದುಪಡಿಗಾಗಿ ಕೇಂದ್ರ ಸರ್ಕಾರ ಕಳುಹಿಸಬೇಕಾಗುತ್ತದೆ. ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಗೆ ಅಂಗೀಕಾರ ಪಡೆಯಬೇಕು, ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿದ ನಂತರ ಮೀಸಲಾತಿ ಹೆಚ್ಚಳ ಜಾರಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
 


Post a Comment

أحدث أقدم