ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಹುದ್ದೆ: ದೇವರಗುಡ್ಡದ ಕಾರ್ಣಿಕದ ಗೊರವಯ್ಯ ಭವಿಷ್ಯ

 ಕರ್ನಾಟಕದಲ್ಲಿ ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಹುದ್ದೆ ದೊರೆಯಲಿದೆ ಎಂದು ದೇವರಗುಡ್ಡದ ಕಾರ್ಣಿಕದ ಗೊರವಯ್ಯ ಭವಿಷ್ಯ ನುಡಿದಿದ್ದಾರೆ.

                 ಬಿಲ್ಲನ್ನೇರಿ ಕಾರ್ಣಿಕ ನುಡಿದ ಗೊರವಪ್ಪ

By : Rekha.M
Online Desk

ಹಾವೇರಿ: ಕರ್ನಾಟಕದಲ್ಲಿ ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಹುದ್ದೆ ದೊರೆಯಲಿದೆ ಎಂದು ದೇವರಗುಡ್ಡದ ಕಾರ್ಣಿಕದ ಗೊರವಯ್ಯ ಭವಿಷ್ಯ ನುಡಿದಿದ್ದಾರೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರು (Ranebennur) ತಾಲೂಕಿನ ದೇವರಗುಡ್ಡದಲ್ಲಿ ನಡೆದ ಮಾಲತೇಶ ದೇವರ ಕಾರ್ಣಿಕೋತ್ಸವದಲ್ಲಿ ಬಿಲ್ಲನ್ನೇರಿ ಗೊರವಪ್ಪ ನಾಗಪ್ಪ ಉರ್ಮಿ ಅವರು (Karnika goravappa nagappa urmi) ಮತ್ತೊಮ್ಮೆ ಕಾರ್ಣಿಕ ನುಡಿದಿದ್ದು, ಕರ್ನಾಟಕದಲ್ಲಿ ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಹುದ್ದೆ ದೊರೆಯಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ದಸರಾ ಹಬ್ಬದ ಸಮಯದಲ್ಲಿ ನಡೆಯೋ ಮಾಲತೇಶ ದೇವರ ಕಾರ್ಣಿಕೋತ್ಸವದಲ್ಲಿ (dasara prediction) ವರ್ಷದ ಭವಿಷ್ಯವಾಣಿ ಅಂತಲೆ ಇದನ್ನು ನಂಬಲಾಗುತ್ತದೆ. ದೇವರಗುಡ್ಡದ ಮಾಲತೇಶ ದೇವಸ್ಥಾನ ಸುಮಾರು ವರ್ಷಗಳ ಇತಿಹಾಸ ಹೊಂದಿದೆ. ದಸರಾ ಹಬ್ಬದ ಸಮಯದಲ್ಲಿ ದೇವರಗುಡ್ಡದ ಕರಿಯಾಲ ಪ್ರದೇಶದಲ್ಲಿ ನಡೆಯೋ ಮಾಲತೇಶ ದೇವರ ಕಾರ್ಣಿಕ ಕೇಳಲು ಜನರ ದಂಡೆ ನೆರೆದಿರುತ್ತೆ. 9 ದಿನಗಳ ಕಾಲ ಕಠಿಣ ಉಪವಾಸ ವೃತ ಮಾಡಿ ಗೊರವಪ್ಪ ನಾಗಪ್ಪ ಉರ್ಮಿ ಕಾರ್ಣಿಕ ನುಡಿಯುತ್ತಾರೆ. 

ದೇವರಗುಡ್ಡದ ಗೊರವಯ್ಯ ಅವರು ನುಡಿಯುವ ಕಾರ್ಣಿಕದ ಮೇಲೆ ಜನರಿಗೆ ಮೊದಲಿಂದಲೂ ಅಪಾರ ನಂಬಿಕೆಯಿದೆ. ಕೊರೊನಾ ಹಾವಳಿಯಿಂದಾಗಿ ಕಳೆದೆರಡು ವರ್ಷಗಳಿಂದ ಜಿಲ್ಲಾಡಳಿತದ ಬಿಗಿನಿಯಮದಿಂದಾಗಿ ಕಾರ್ಣಿಕ ವೀಕ್ಷಿಸಲು ಹೆಚ್ಚು ಜನರು ಸೇರುತ್ತಿರಲಿಲ್ಲ. ಆದರೆ ಈ ಬಾರಿ ಅಪಾರ ಜನಸ್ತೋಮ ಸೇರಿದ್ದರು. ಪ್ರತಿ ಬಾರಿ ಕರಿಯಾಲ ಪ್ರದೇಶಕ್ಕೆ ಡಮರುಗ, ಚಾಟಿ ಏಟಿನ ಸದ್ದಿನ ಮೂಲಕ ಗೊರವಪ್ಪಗಳು ಕಾರ್ಣಿಕದ ಗೊರವಪ್ಪನನ್ನು ಮೆರವಣಿಗೆಯಲ್ಲಿ ಕರೆದುಕೊಂಡು ಬರುತ್ತಾರೆ. 

ಸರಿಯಾಗಿ 6 ಗಂಟೆ ಆಗುತ್ತಿದ್ದಂತೆ ಕಾರ್ಣಿಕ ಸ್ಥಳಕ್ಕೆ ಬರುವ ಗೊರವಯ್ಯ 21 ಅಡಿ ಎತ್ತರದ ಬಿಲ್ಲನ್ನೇರಿ ಸದ್ದಲೆ ಎನ್ನುತ್ತಲೆ ಕಿಕ್ಕಿರಿದು ಸೇರಿದ ಜನರ ನಡುವೆ ಕಾರ್ಣಿಕ ನುಡಿಯುತ್ತಾರೆ. ವರ್ಷದ ಭವಿಷ್ಯವಾಣಿ ನುಡಿದ ಬಳಿಕ ಬಿಲ್ಲಿನಿಂದ ಕೆಳಕ್ಕೆ ಬೀಳುತ್ತಾರೆ. ಈ ವರ್ಷ ಬಿಲ್ಲನ್ನೇರಿದ ಗೊರವಪ್ಪ ನಾಗಪ್ಪ ಉರ್ಮಿ “ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್” ಎಂದು ಕಾರ್ಣಿಕ ನುಡಿದಿದ್ದಾರೆ. ಬಳಿಕ ದೇವಸ್ಥಾನದ ಪ್ರಧಾನ ಅರ್ಚಕ ಸಂತೋಷ್ ಭಟ್ ಕಾರ್ಣಿಕ ವಾಣಿಯ ವಿಶ್ಲೇಷಣೆ ಮಾಡಿದ್ದಾರೆ. 

ಈ ವರ್ಷದ ಭವಿಷ್ಯವೇನು?
ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್ ಎನ್ನುತ್ತಾ ಗೊರವಪ್ಪ ನಾಗಪ್ಪ ಉರ್ಮಿ ಅವರು ನುಡಿದ ಭವಿಷ್ಯ, 'ಸಣ್ಣಸಣ್ಣ ರೈತರಿಗೂ ಉತ್ತಮವಾಗಲಿದೆ. ಯುವ ರಾಜಕಾರಣಿಗಳಿಗೆ ಹೆಚ್ಚಿನ ಅವಕಾಶ ದೊರೆಯಲಿದೆ. ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನ ದೊರೆಯಲಿದೆ ಎಂದು ಕಾರ್ಣಿಕ ವಿಶ್ಲೇಷಿಸಿದ್ದಾರೆ.


Post a Comment

Previous Post Next Post