ಬೆಂಗಳೂರಿನ ಅರಮನೆ ಮೈದಾನದಲ್ಲಿಂದು ರಾಜ್ಯ ಬಿಜೆಪಿಯ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು, ಸಾಮಾಜಿಕ ನ್ಯಾಯಕ್ಕೆ ಬಿಜೆಪಿ ಬದ್ಧವಾಗಿದ್ದು, ಎಸ್‌ಸಿ, ಎಸ್‌ಟಿ ಸಮುದಾಯದ ಮೀಸಲಾತಿ ಹೆಚ್ಚಿಸುವ ಕೆಲಸವನ್ನು ಮಾಡಲಾಗುವುದು ಎಂದರು.
ಇಂದಿನ ಕೋರ್‌ಕಮಿಟಿ ಸಭೆಯಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಸಂಬಂಧ ಸುದೀರ್ಘ ಚರ್ಚೆ ಮಾಡಿದ್ದೇವೆ. ಈ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಎಸ್‌ಸಿ, ಎಸ್‌ಟಿ ಮೀಸಲಾತಿ ಸಂಬಂಧ ನ್ಯಾಯಮೂರ್ತಿ ನಾಗ್‌ಮೋಹನ್‌ದಾಸ್ ಸಮಿತಿ ಮತ್ತು ನ್ಯಾಯಮೂರ್ತಿ ಸುಭಾಷ್ ಆಡಿ ಸಮಿತಿ ನೀಡಿರುವ ವರದಿ ಬಗ್ಗೆ ಚರ್ಚೆ ಮಾಡಿ ನಿರ್ಣಯ ತೆಗೆದುಕೊಳ್ಳಬೇಕು. ನಿರ್ಣಯಕ್ಕೆ ನಾವೆಲ್ಲರೂ ಬದ್ಧರಾಗಿರಬೇಕು ಎಂದರು.
ಮುಂದಿನ ೬ ತಿಂಗಳಲ್ಲಿ ಚುನಾವಣೆ ಎದಿರಾಗುತ್ತಿದೆ. ಎಲ್ಲವನ್ನೂ ಚರ್ಚೆ ಮಾಡಿ ನಿರ್ಣಯ ತೆಗೆದುಕೊಳ್ಳಬೇಕಾಗಿದೆ ಎಂದರು.
ಇಂದಿನ ಕೋರ್‌ಕಮಿಟಿ ಸಭೆಯಲ್ಲಿ ಬೆಂಗಳೂರು ಅಂತಾರಾಷ್ಟ್ರಿಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ ಪುತ್ಥಳಿ ಅನಾವರಣಕ್ಕೆ ಪ್ರಧಾನಿ ಮೋದಿ ಅವರನ್ನೇ ಕರೆಸುವ ಬಗ್ಗೆಯೂ ಚರ್ಚೆಯಾಗಿದೆ ಎಂದರು.
ಡೀಂ ಫಾರೆಸ್ಟ್ ವಿಚಾರದಲ್ಲೂ ಸುಧಾರಣೆಯನ್ನು ತಂದು ಜನರ ಹಿತದೃಷ್ಟಿಯಿಂದ ತೀರ್ಮಾನಗಳನ್ನು ಕೈಗೊಳ್ಳುತ್ತೇವೆ ಎಂದರು.
ಕಟೀಲು ಭಾಷಣ
ಕಾರ್ಯಕಾರಿಣಿಯಲ್ಲಿ ಸ್ವಾಗತ ಭಾಷಣ ಮಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‌ಕುಮಾರ್ ಕಟೀಲು, ಎಸ್‌ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಬೇಕೆಂಬ ಪಕ್ಷದ ಬೇಡಿಕೆಗೆ ಮುಖ್ಯಮಂತ್ರಿಗಳು ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
إرسال تعليق