ರಾಯಚೂರು ಜಿಲ್ಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅಗತ್ಯವಿರುವ ತಾಂತ್ರಿಕ ಸಹಾಯಕರು ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಂಗ್ರಹ ಚಿತ್ರರಾಯಚೂರು ಜಿಲ್ಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅಗತ್ಯವಿರುವ ತಾಂತ್ರಿಕ ಸಹಾಯಕರು ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ಹೆಸರು:
ತಾಂತ್ರಿಕ ಸಹಾಯಕರು (ಸಿವಿಲ್), ತಾಂತ್ರಿಕ ಸಹಾಯಕರು (ತೋಟಗಾರಿಕೆ), ತಾಂತ್ರಿಕ ಸಹಾಯಕರು (ಅರಣ್ಯ), ತಾಂತ್ರಿಕ ಸಹಾಯಕರು (ಕೃಷಿ)
ಕರ್ತವ್ಯ ಸ್ಥಳ: ರಾಯಚೂರು ಜಿಲ್ಲೆ
ಖಾಲಿಯಿರುವ ಹುದ್ದೆಗಳ ಸಂಖ್ಯೆ: 11
ಹುದ್ದೆ | ಹುದ್ದೆಗಳ ಸಂಖ್ಯೆ |
ತಾಂತ್ರಿಕ ಸಹಾಯಕರು (ಸಿವಿಲ್) | 2 |
ತಾಂತ್ರಿಕ ಸಹಾಯಕರು (ತೋಟಗಾರಿಕೆ) | 1 |
ತಾಂತ್ರಿಕ ಸಹಾಯಕರು (ಅರಣ್ಯ) | 2 |
ತಾಂತ್ರಿಕ ಸಹಾಯಕರು (ಕೃಷಿ) | 6 |
ಶೈಕ್ಷಣಿಕ ಅರ್ಹತೆ:
ತಾಂತ್ರಿಕ ಸಹಾಯಕರು (ಸಿವಿಲ್) – ಡಿಪ್ಲೊಮಾ ಸಿವಿಲ್/ ಬಿಇ/ ಬಿ.ಟೆಕ್ (ಸಿವಿಲ್). ಬಿಇ (ಸಿವಿಲ್) ಅಭ್ಯರ್ಥಿಗಳು ಬಂದಲ್ಲಿ ಡಿಪ್ಲೊಮಾ ಸಿವಿಲ್ ಅಭ್ಯರ್ಥಿಗಳನ್ನು ಪರಿಗಣಿಸುವುದಿಲ್ಲ.
ತಾಂತ್ರಿಕ ಸಹಾಯಕರು (ತೋಟಗಾರಿಕೆ) – ತೋಟಗಾರಿಕೆ ಪದವಿ ಮತ್ತು ಇತರ ತತ್ಸಮಾನ ಶೈಕ್ಷಣಿಕ ಅರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ತಾಂತ್ರಿಕ ಸಹಾಯಕರು (ಅರಣ್ಯ) – ಅರಣ್ಯ ಪದವಿ ಮತ್ತು ಇತರ ತತ್ಸಮಾನ ಶೈಕ್ಷಣಿಕ ಅರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ತಾಂತ್ರಿಕ ಸಹಾಯಕರು (ಕೃಷಿ) – ಕೃಷಿ ಪದವಿ ಮತ್ತು ಇತರ ತತ್ಸಮಾನ ಶೈಕ್ಷಣಿಕ ಅರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಿತಿ: ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ
ವೇತನ:
ಮಾಸಿಕ ರೂ. 24,000 ಸಂಭಾವನೆ ಹಾಗೂ ಪ್ರಯಾಣ ಭತ್ಯೆ ರೂ. 2000 ನೀಡಲಾಗುವುದು.
ತಾಂತ್ರಿಕ ಸಹಾಯಕ ಸಿವಿಲ್ ಹುದ್ದೆಗೆ ಡಿಪ್ಲೊಮಾ ಅಭ್ಯರ್ಥಿಗಳಿಗೆ ರೂ. 22,000 ಸಂಭಾವನೆ ನೀಡಲಾಗುವುದು
ಆಯ್ಕೆ ವಿಧಾನ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ, ದಾಖಲಾತಿ ಪರಿಶೀಲನೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಹೊಂದಿದ ಅಂಕಗಳು ಹಾಗೂ ಪಡೆದ ಸೇವಾ ಅನುಭವದ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು.
ಅನುಭವ: ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ 3 ವರ್ಷ ಅನುಭವ ಹೊಂದಿರಬೇಕು.
ಅರ್ಜಿ ಸಲ್ಲಿಕೆಯ ವಿಧಾನ:
ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು. ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 03, 2022
ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಾದ ದಿನಾಂಕ: ಡಿಸೆಂಬರ್ 12, 2022
ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸುವ ದಿನಾಂಕ: ಡಿಸೆಂಬರ್ 15, 2022
ಹೆಚ್ಚಿನ ಮಾಹಿತಿಗೆ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ
https://ggle.io/5OKL
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://bityl.co/FrpX
إرسال تعليق