ನೇಮಕಾತಿ 2022: ಚಾಮರಾಜನಗರ ಜಿಲ್ಲಾ ಕೋರ್ಟ್ ನಲ್ಲಿ 11 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿ

 ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

                                                ಚಾಮರಾಜನಗರ ಜಿಲ್ಲಾ ಕೋರ್ಟ್

By : Rekha.M
Online Desk

ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ: ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು
ಕರ್ತವ್ಯ ಸ್ಥಳ: ಚಾಮರಾಜನಗರ

ಹುದ್ದೆಗಳ ಸಂಖ್ಯೆ: 11

ಹುದ್ದೆಬೆರಳಚ್ಚುಗಾರಬೆರಳಚ್ಚು ನಕಲುಗಾರ
ಹುದ್ದೆಗಳ ಸಂಖ್ಯೆ   7   4

ಶೈಕ್ಷಣಿಕ ಅರ್ಹತೆ :
ಬೆರಳಚ್ಚುಗಾರ: ದ್ವಿತೀಯ ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟಿಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್/ ಸೆಕ್ರೇಟರಿಯೇಟಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಬೆರಳಚ್ಚು ನಕಲುಗಾರ: ದ್ವಿತೀಯ ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟಿಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್/ ಸೆಕ್ರೇಟರಿಯೇಟಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ: 
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳು – ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳು – ಗರಿಷ್ಠ 35 ವರ್ಷ

ಆಯ್ಕೆ ವಿಧಾನ: 
ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಬೆರಳಚ್ಚು ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ: 
ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 200
ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ

ಶುಲ್ಕ ಪಾವತಿ ವಿಧಾನ: 
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 30, 2022

ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 01, 2022

ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಗಳು
https://ggle.io/5OlK
https://ggle.io/5OlL

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://bityl.co/Fv3X




Post a Comment

Previous Post Next Post