ರಾಜ್ಯದ 10 ಕಡೆಗಳಲ್ಲಿ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ರಾಜ್ಯದಲ್ಲಿ ಮತ್ತೊಂದು ಸುತ್ತಿನ ಧರ್ಮ ದಂಗಲ್ ಆರಂಭವಾಗುವ ಸ್ಪಷ್ಟ ಸೂಚನೆ ಸಿಕ್ಕಿತ್ತು. ಹಿಂದೂ ಸಂಘಟನೆಗಳು ರಾಜ್ಯವ್ಯಾಪಿ ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿದ್ದವು.
ಸಿಎಂ ಬೊಮ್ಮಾಯಿ
Online Desk
ಬೆಂಗಳೂರು: ರಾಜ್ಯದ 10 ಕಡೆಗಳಲ್ಲಿ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ರಾಜ್ಯದಲ್ಲಿ ಮತ್ತೊಂದು ಸುತ್ತಿನ ಧರ್ಮ ದಂಗಲ್ ಆರಂಭವಾಗುವ ಸ್ಪಷ್ಟ ಸೂಚನೆ ಸಿಕ್ಕಿತ್ತು. ಹಿಂದೂ ಸಂಘಟನೆಗಳು ರಾಜ್ಯವ್ಯಾಪಿ ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿದ್ದವು. ಸರ್ಕಾರದ ನಿರ್ಧಾರಕ್ಕೆ ಬಲವಾದ ವಿರೋಧ ವ್ಯಕ್ತಪಡಿಸಿದ್ದವು.
ಈ ಬಗ್ಗೆ ಇಂದು ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಈ ವಿಷಯ ಸರ್ಕಾರದ ಮಟ್ಟದಲ್ಲಿ ಚರ್ಚೆಯೇ ಆಗಿಲ್ಲ, ಇದು ಸರ್ಕಾರದ ನಿಲುವು ಅಲ್ಲ, ಈ ಬಗ್ಗೆ ಚರ್ಚೆ ಆಗಿಲ್ಲ. ವಕ್ಫ್ ಬೋರ್ಡ್ ಅಧ್ಯಕ್ಷರು ಹೇಳಿರುವುದು ಅವರ ವೈಯಕ್ತಿಕ ಹೇಳಿಕೆಯಷ್ಟೇ ಎಂದಿದ್ದಾರೆ.
Post a Comment