ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ಶಿವಮೊಗ್ಗ ಜಿಲ್ಲಾ ಎನ್ ಎಸ್ ಯು ಐ ವತಿಯಿಂದ ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಸೈನ್ಸ್ ಮೈದಾನದಿಂದ ಸಾವಿರಾರು ವಿದ್ಯಾರ್ಥಿಗಳು ಎನ್ ಎಸ್ ಯು ಐ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಮಹವೀರವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ಮುಖಂಡ ಹಾಗೂ ಪದವೀಧರರ ಸಹಕಾರ ಸಂಘದ ಅದ್ಯಕ್ಷ ಎಸ್.ಪಿ ದಿನೇಶ್, ಕೇಂದ್ರ ಸರ್ಕಾರ ಯಾವುದೇ ಪೂರ್ವ ತಯಾರಿ ಇಲ್ಲದೇ ಜಾರಿಗೊಳಿಸಿರುವ ಹೊಸ ರಾಷ್ಟ್ರೀಯ ಶಿಕ್ಷಣ್ ನೀತಿಯಂದಾಗಿ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಶಿಕ್ಷಣ್ ವಿರೋಧಿ ನೀತಿಯಿಂದಾಗಿ ವಿದ್ಯಾರ್ಥಿಗಳಿಗೆ ಅನಗತ್ಯ ತೊಂದರೆ, ಹೊರೆಯಾಗುತ್ತಿದೆ ಎಂದು ಅಕ್ರೋಶ ವ್ಯಕ್ತಪಡಿಸಿದರು.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದಾಗಿ ಮುಖ್ಯವಾಗಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ವಿಳಂಬವಾಗುತ್ತಿದೆ. ವಾರ್ಷಿಕ ಪ್ರವೇಶ ಶುಲ್ಕದಲ್ಲಿ ವಿಪರೀತ ಹೆಚ್ಚಳವಾಗಿದೆ. ಪ್ರಾಥಮಿಕ ಮತ್ತು ಪ್ರೌಡಶಾಲೆ ವಸತಿ ಸಮಸ್ಯೆ, 8ನೇ ತರಗತಿಯ ವಿದ್ಯರ್ಥಿಗಳಿಗೆ ಸೈಕಲ್ ವಿತರಣೆಯಾಗಿಲ್ಲ, ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯದ ಸಮಸ್ಯೆ ಉಂಟಾಗಿದೆ, ಪದವಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ವಿಸ್ತರಣೆ ಮಾಡುತ್ತಿಲ್ಲ, ಕುವೆಂಪು ಮುಕ್ತ ವಿಶ್ವವಿದ್ಯಾಲಯದ ಪರೀಕ್ಷಾ ನಕಲು, 1 ರಿಂದ 10 ನೆ ತರಗತಿಯ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ವಿದ್ಯಾರ್ಥಿ ವೇತನ ರದ್ದುಪಡಿಸಿರುವುದು, ಪ್ರಸ್ತುತ ಸಾಲಿನ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳ ಕೊರತೆ ಮುಂತಾದ ಸಮಸ್ಯೆಗಳು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಯಿಂದ ಉಂಟಾಗಿದ್ದು, ಇದರಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಮಾರಕ ಪರಿಣಾಮ ಬೀರುತ್ತಿದೆ ಕೂಡಲೇ ಸರ್ಕಾರಗಳು ಈ ದ್ವಂದ್ವ ನೀತಿಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು. ಎನ್ ಎಸ್ ಯು ಐ ಜಿಲ್ಲಾದ್ಯಕ್ಷ ವಿಜಯ್ ಮಾತನಾಡಿ, ಕೂಡಲೇ ಸ್ಥಗಿತಗೊಳಿಸಿರುವ ಪದವಿ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಯೋಜನೆ ಜಾರಿಗೊಳಿಸಬೆಕು, 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಪುನಃ ಜಾರಿಗೊಳಿಸಬೇಕು, ಗ್ರಾಮಾಂತರ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯ, ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿಸ್ತರಣೆ, ವಸತಿ ಶಾಲೆಗಳ ಸಮಸ್ಯೆ ಸರಿಪಡಿಸಬೇಕು, ವಾರ್ಷಿಕ ಪ್ರವೇಶ ಶುಲ್ಕ ಹೆಚ್ಚಳ ಮಾಡಿರುವುದನ್ನು ರದ್ದುಪಡಿಸಬೇಕು, ಪರೀಕ್ಷೆ ಫಲಿತಾಂಶದಲ್ಲಿ ವಿಳಂಭ ಮಾಡಬಾರದು, ಪ್ರಸ್ತುತ ಸಾಲಿನ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಅಗ್ರಹಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಶಿಕ್ಷಣ ವಿರೋಧಿ ನೀತಿಯನ್ನು ಕೈಬಿಟ್ಟು, ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು. ಈ ನಿಟ್ಟಿನಲ್ಲಿ ರಾಷ್ಟ್ರಪತಿಗಳು ಮದ್ಯೆ ಪ್ರವೇಶಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಕೈಬಿಡಲು ಆದೇಶ ನೀಡಬೆಕು ಎಂದು ಒತ್ತಾಯಿಸಿದರಲ್ಲದೆ, ಇದೇ ರೀತಿ ಶಿಕ್ಷಣ ವಿರೋಧಿ ನೀತಿ ಮುಂದುವರೆಸಿದರೆ ವಿದ್ಯಾರ್ಥಿಗಳೊಂದಿಗೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ನಂತರ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಪ್ರಮುಖರಾದ,
ರವಿ ಕಾಟಿಕೆರೆ, ಚರಣ್, ಹರ್ಷಿತ, ಚಂದ್ರೋಜಿ ರಾವ್, ವರುಣ್ ವಿ ಪಂಡಿತ್, ರವಿ , ಶಿವು ಉಲಾಸ್, ಪ್ರದೀಪ, ಸಾಗರ್, ಶಶಿ, ಗಿರೀಶ, ವಿಶಾಲ್, ತೌಫಿಕ್, ದೇವು, ಸುಹಾಸ್, ಕುಮಾರ್, ಪ್ರಸನ್ನ, ಅಭಿ, ಪ್ರದೀಪ, ನರೇಂದ್ರ, ಮಲವಗೊಪ್ಪ ಶಿವು, ಧನರಾಜ್, ಗೌತಮ್, ಹೇಮಂತ್, ಬಸವರಾಜ್, ಪುರ್ಲೆ ವೆಂಕಟೇಶ್, ಅಭಿ ಹಾಗೂ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡು ಬಿಜೆಪಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
Post a Comment