ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಿಸುವ ಭರದಲ್ಲಿ ನಾಲಿಗೆ ಹರಿಬಿಟ್ಟಿರುವ ಪಾಕ್ ಸಚಿನ ಬಿಲಾವಲ್ ಭುಟ್ಟೋ-ಜರ್ದಾರಿ ವಿರುದ್ಧ ಭಾರತದಲ್ಲಿ ವ್ಯಾಪಕ ಆಕ್ರೋಶ ಮತ್ತು ಪ್ರತಿಭಟನೆ ಮುಂದುವರೆದಿರುವಂತೆಯೇ ಇತ್ತ ಮತ್ತೋರ್ವ ಪಾಕ್ ಸಚಿವೆ ಭಾರತಕ್ಕೆ ಅಣುಬಾಂಬ್ ಎಚ್ಚರಿಕೆ ನೀಡಿದ್ದಾರೆ.
ಪಾಕಿಸ್ತಾನ ಪೀಪಲ್ಸ್ ಪಾರ್ಟಿ ನಾಯಕಿ ಶಾಜಿಯಾ ಮಾರಿ
ಇಸ್ಲಾಮಾಬಾದ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಿಸುವ ಭರದಲ್ಲಿ ನಾಲಿಗೆ ಹರಿಬಿಟ್ಟಿರುವ ಪಾಕ್ ಸಚಿನ ಬಿಲಾವಲ್ ಭುಟ್ಟೋ-ಜರ್ದಾರಿ ವಿರುದ್ಧ ಭಾರತದಲ್ಲಿ ವ್ಯಾಪಕ ಆಕ್ರೋಶ ಮತ್ತು ಪ್ರತಿಭಟನೆ ಮುಂದುವರೆದಿರುವಂತೆಯೇ ಇತ್ತ ಮತ್ತೋರ್ವ ಪಾಕ್ ಸಚಿವೆ ಭಾರತಕ್ಕೆ ಅಣುಬಾಂಬ್ ಎಚ್ಚರಿಕೆ ನೀಡಿದ್ದಾರೆ.
ಪಾಕಿಸ್ತಾನ ಪೀಪಲ್ಸ್ ಪಾರ್ಟಿ ನಾಯಕಿ ಶಾಜಿಯಾ ಮಾರಿ ಭಾರತದ ವಿರುದ್ಧ ಪರಮಾಣು ಯುದ್ಧದ ಬೆದರಿಕೆ ಹಾಕಿದ್ದಾರೆ. ಬೋಲ್ ನ್ಯೂಸ್ ಜೊತೆಗಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಪಾಕಿಸ್ತಾನದ ಬಳಿ ಅಣುಬಾಂಬ್ ಇದೆ ಎಂಬುದನ್ನು ಭಾರತ ಮರೆಯಬಾರದು. ನಮ್ಮ ಪರಮಾಣು ಸ್ಥಿತಿಯು ಮೌನವಾಗಿರಲು ಉದ್ದೇಶಿಸಿಲ್ಲ. ಅಗತ್ಯ ಬಿದ್ದರೆ ನಾವು ಅದನ್ನು ಉಪಯೋಗಿಸುವದರಿಂದ ಹಿಂದೆ ಸರಿಯುವುದಿಲ್ಲ" ಎಂದು ಹೇಳಿದರು.
ಬಿಲಾವಲ್ ಭುಟ್ಟೊ ಅವರನ್ನು ಬೆಂಬಲಿಸಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದ ಅವರು ಭಾರತದ ವಿರುದ್ಧ ತೀವ್ರ ಕಿಡಿಕಾರಿದ್ದು, ಶಾಜಿಯಾ ಭಾರತಕ್ಕೆ ಬೆದರಿಕೆ ಹಾಕಿದ್ದು, ಮೋದಿ ಸರ್ಕಾರ ಯುದ್ಧ ಸಾರಿದರೆ ಅದಕ್ಕೆ ತಕ್ಕ ಉತ್ತರ ಸಿಗುತ್ತದೆ. ಪಾಕಿಸ್ತಾನಕ್ಕೆ ಪರಮಾಣು ರಾಷ್ಟ್ರದ ಸ್ಥಾನಮಾನ ನೀಡಿ ಸುಮ್ಮನಿರಲು ಆಗಿಲ್ಲ. ಪಾಕಿಸ್ತಾನಕ್ಕೂ ಹೇಗೆ ಉತ್ತರಿಸಬೇಕು ಎಂಬುದು ಗೊತ್ತಿದೆ ಎಂದು ಹೇಳಿದರು.
ಅಂತೆಯೇ ನೀವು ಪಾಕಿಸ್ತಾನದ ವಿರುದ್ಧ ಪದೇ ಪದೇ ಆರೋಪಗಳನ್ನು ಮಾಡುತ್ತಿದ್ದರೆ, ಪಾಕಿಸ್ತಾನವು ಮೌನವಾಗಿ ಕೇಳಲು ಸಾಧ್ಯವಿಲ್ಲ, ಇದು ಸಂಭವಿಸುವುದಿಲ್ಲ ಎಂದು ಅವರು ಹೇಳಿದರು.
Post a Comment