ಮೂಲಭೂತ ಸೌಕರ್ಯ ಒದಗಿಸಿಕೊಟ್ಟಿಲ್ಲ, ಸರಿಯಾಗಿ ರಾಜಕಾರಣಿಗಳು ಕೆಲಸ ಮಾಡುತ್ತಿಲ್ಲ ಎಂದು ಅಲ್ಲಲ್ಲಿ ಗ್ರಾಮಸ್ಥರು, ಜನರು ಮತ ಚಲಾವಣೆ ಮಾಡದಿರುವುದು ಕೇಳಿದ್ದೇವೆ, ನೋಡಿದ್ದೇವೆ. ಇಲ್ಲಿ ಜನರಿಗೆ ಸರಿಯಾಗಿ ಪಕ್ಷಗಳ ರಾಜಕಾರಣಿಗಳು ಸ್ಪಂದಿಸುತ್ತಿಲ್ಲ, ರಸ್ತೆ ಕಾಮಗಾರಿ ಮಾಡಿಕೊಟ್ಟಿಲ್ಲ ಎಂದು ರಾಜ್ಯದ ಮೂರೂ ಪಕ್ಷಗಳ ಕಾರ್ಯಕರ್ತರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.
ರಸ್ತೆಯ ದುರವಸ್ಥೆಯನ್ನು ತೋರಿಸುತ್ತಿರುವ ಪಕ್ಷಗಳ ಸದಸ್ಯರು ಮತ್ತು ಗ್ರಾಮಸ್ಥರು, ರಾಜೀನಾಮೆ ಸಲ್ಲಿಕೆಚಿಕ್ಕಮಗಳೂರು: ಮೂಲಭೂತ ಸೌಕರ್ಯ ಒದಗಿಸಿಕೊಟ್ಟಿಲ್ಲ, ಸರಿಯಾಗಿ ರಾಜಕಾರಣಿಗಳು ಕೆಲಸ ಮಾಡುತ್ತಿಲ್ಲ ಎಂದು ಅಲ್ಲಲ್ಲಿ ಗ್ರಾಮಸ್ಥರು, ಜನರು ಮತ ಚಲಾವಣೆ ಮಾಡದಿರುವುದು ಕೇಳಿದ್ದೇವೆ, ನೋಡಿದ್ದೇವೆ. ಇಲ್ಲಿ ಜನರಿಗೆ ಸರಿಯಾಗಿ ಪಕ್ಷಗಳ ರಾಜಕಾರಣಿಗಳು ಸ್ಪಂದಿಸುತ್ತಿಲ್ಲ, ರಸ್ತೆ ಕಾಮಗಾರಿ ಮಾಡಿಕೊಟ್ಟಿಲ್ಲ ಎಂದು ರಾಜ್ಯದ ಮೂರೂ ಪಕ್ಷಗಳ ಕಾರ್ಯಕರ್ತರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.
ಇದಾಗಿದ್ದು ಚಿಕ್ಕಮಗಳೂರು ಜಿಲ್ಲೆಯ ಯಡಗುರು ಎಂಬಲ್ಲಿ. ಮಳೆ, ಪ್ರವಾಹಕ್ಕೆ ಹಾನಿಗೀಡಾದ ರಸ್ತೆಗಳನ್ನು ದುರಸ್ತಿ ಮಾಡಿಲ್ಲ, ಸಾರ್ವಜನಿಕರಿಗೆ ತೊಂದರೆಯಾಗುತ್ತದೆ, ನಮ್ಮಿಂದ ಜನರಿಗೆ ಉತ್ತರ ನೀಡಲು ಸಾಧ್ಯವಾಗುತ್ತಿಲ್ಲ ಎಂದು 450ಕ್ಕೂ ಹೆಚ್ಚು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ನ ಕಾರ್ಯಕರ್ತರು ಸಾಮೂಹಿಕವಾಗಿ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸದಂತೆ ಹಾಗೂ ಯಾವುದೇ ರಾಜಕೀಯ ನಾಯಕರನ್ನು ಗ್ರಾಮದೊಳಗೆ ಬರಲು ಬಿಡಬಾರದು ಎಂದು ಕೂಡ ನಿರ್ಧರಿಸಿದ್ದಾರೆ.
Post a Comment