ಶ್ರೀರಂಗಪಟ್ಟಣ: ಕೇಸರಿ ಧ್ವಜ ಹಿಡಿದು ಜಾಮಿಯಾ ಮಸೀದಿ ಪ್ರವೇಶಿಸಲು ಬಂದ ಹಿಂದೂ ಕಾರ್ಯಕರ್ತರ ತಡೆದ ಪೊಲೀಸರು!

 ಶ್ರೀರಂಗಪಟ್ಟಣದಲ್ಲಿ ಸಾವಿರಾರು ಹಿಂದೂ ಕಾರ್ಯಕರ್ತರು ಹಾಗೂ ಹನುಮ ಭಕ್ತರು ಕೇಸರಿ ಧ್ವಜ ಹಿಡಿದು ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿತ್ತು.

           ಹನುಮ ಜಯಂತಿ ಯಾತ್ರೆ.

By : Rekha.M
Online desk

ಮೈಸೂರು: ಶ್ರೀರಂಗಪಟ್ಟಣದಲ್ಲಿ ಸಾವಿರಾರು ಹಿಂದೂ ಕಾರ್ಯಕರ್ತರು ಹಾಗೂ ಹನುಮ ಭಕ್ತರು ಕೇಸರಿ ಧ್ವಜ ಹಿಡಿದು ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿತ್ತು.

ಘಟನೆಯ ಸೂಕ್ಷ್ಮತೆ ಅರಿತ ಪೊಲೀಸರು ಹೆಚ್ಚುವರಿ ಭದ್ರತಾ ಪಡೆಗಳನ್ನು ಸ್ಥಳದಲ್ಲಿ ನಿಯೋಜಿಸುವ ಮೂಲಕ ಪರಿಸ್ಥಿತಿ ಉಲ್ಬಣಗೊಳ್ಳುವುದನ್ನು ತಪ್ಪಿಸಿದರು.

ಹನುಮಾನ್ ಭಕ್ತರು ನಿಮಿಷಾಂಭ ದೇವಸ್ಥಾನದ ಬಳಿಯ ಹನುಮಾನ್ ದೇವಸ್ಥಾನದಿಂದ ಸಂಕೀರ್ತನಾ ಯಾತ್ರೆ ನಡೆಸಿದರು. ರಸ್ತೆಗಳಲ್ಲಿ ಸಂಚರಿಸುವ ವೇಳೆ ಅಯೋಧ್ಯೆಯಲ್ಲಿ ರಾಮಮಂದಿರ, ಶ್ರೀರಂಗಪಟ್ಟಣದಲ್ಲಿ ಹನುಮಾನ್ ಮಂದಿರ ಎಂದು ಘೋಷಣೆಗಳನ್ನು ಕೂಗಿದರು.

ಬಳಿಕ ಮಸೀದಿ ಬಳಿ ಹಾಕಿದ್ದ ಬ್ಯಾರಿಕೇಡ್‌ಗಳನ್ನು ಮುರಿದು ಜಾಮಿಯಾ ಮಸೀದಿಗೆ ಪ್ರವೇಶಿಸಲು ಯತ್ನಿಸಿದರು. ಈ ವೇಳೆ ಪೊಲೀಸರು ಅವರನ್ನು ತಡೆದರು, ಈ ವೇಳೆ ಪೊಲೀಸರು ಮತ್ತು ಭಕ್ತರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಬಳಿಕ ಹಿಂದೂ ಕಾರ್ಯಕರ್ತರು ಮಸೀದಿ ಬಳಿ ಪ್ರತಿಭಟನೆ ನಡೆಸಲು ಮುಂದಾದಾಗ ಪೊಲೀಸರು ಇದನ್ನು ತಡೆದು, ಸ್ಥಳದಿಂದ ತೆರಳುವಂತೆ ಸೂಚಿಸಿದರು.

ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತರು ಮನೆಯೊಂದರಲ್ಲಿದ್ದ ಹಸಿರು ಬಾವುಟ ತೆಗೆದು ಕೇಸರಿ ಧ್ವಜ ಹಾಕುವಲ್ಲಿ ಯಶಸ್ವಿಯಾದರು.

Post a Comment

Previous Post Next Post