ನಮಗೆ ಜೀವ ನೀಡುವುದೂ ಗೊತ್ತು, ಜೀವ ತೆಗೆಯುವುದೂ ಗೊತ್ತು ಎಂದು ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.
ಪ್ರಜ್ಞಾ ಸಿಂಗ್ ಠಾಕೂರ್
ಶಿವಮೊಗ್ಗ: ನಮಗೆ ಜೀವ ನೀಡುವುದೂ ಗೊತ್ತು, ಜೀವ ತೆಗೆಯುವುದೂ ಗೊತ್ತು ಎಂದು ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಹಿಂದೂ ಜಾಗರಣ ವೇದಿಕೆ ದಕ್ಷಿಣ ಪ್ರಾಂತ ತ್ರೈವಾರ್ಷಿಕ ಸಮ್ಮೇಳನ ಆಯೋಜಿಸಿದ್ದು, ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ದಿಕ್ಸೂಚಿ ಭಾಷಣದಲ್ಲಿ, ಹಿಂದೂಗಳು ಎಲ್ಲೇ ಇದ್ದರೂ ತಮ್ಮ ಅಸ್ತಿತ್ವ ಉಳಿಸಿಕೊಳ್ಳಬೇಕು. ಇದಕ್ಕೂ ಮೊದಲು ಉಡುಪಿಗೆ ದುರ್ಗಾ ಪೂಜೆಗೆ ಬರಬೇಕಿತ್ತು.
ಆದರೆ ಕಾಂಗ್ರೆಸ್ ಅವಧಿಯಲ್ಲಿ ನನ್ನ ಮೇಲೆ ಆದ ಹಲ್ಲೆಯಿಂದಾಗಿ ನೋವು ಹೆಚ್ಚಾಗಿ ಬರಲಾಗಲಿಲ್ಲ. ಆದರೆ ಶಿವಮೊಗ್ಗದ ಕಾರ್ಯಕ್ರಮಕ್ಕೆ ಬರಲೇಬೇಕು ಎಂದು ಬಂದಿದ್ದೇನೆ. ಜನನಿ ಜನ್ಮಭೂಮಿ ಎಂದು ನಾವು ನಂಬಿದ್ದೇನೆ. ಸ್ವರ್ಗಕ್ಕಿಂತ ಹೆಚ್ಚು ಎಂದು ಭಾವಿಸಿದ್ದೇವೆ. ಹಾಗಾಗಿ ಈ ಭೂಮಿಯ ಋಣ ತೀರಿಸಬೇಕು ಎಂದು ಕರೆ ನೀಡಿದ್ದಾರೆ.
ನಾನು ಬಿಜೆಪಿಯ ಸಂಸದೆ. ನಾನು ಜನರಿಗಾಗಿ ಸಂಸತ್ತಿನ ಒಳಗೆ, ಹೊರಗೆ ಹೋರಾಡುತ್ತಿದ್ದೇನೆ. ದೇಶದಲ್ಲಿ ಸಾಧು-ಸಂತರ ಮೇಲೆ ಹಲ್ಲೆ, ಹತ್ಯೆ ಆದಾಗ ಯಾರೂ ಮಾತನಾಡುವುದಿಲ್ಲ. ಆದರೆ ನಾವು ಸುಮ್ಮನೆ ಕೂರುವವರಲ್ಲ. ನನಗೂ ಸಾಕಷ್ಟು ಜೀವ ಬೆದರಿಕೆ ಬರುತ್ತದೆ. ಆದರೆ ನಾನು ಅಂತಹವರಿಗೆ ಎದುರು ಬಂದು ಮಾತನಾಡುವಂತೆ ಹೇಳುತ್ತೇನೆ.
ನಾನು ಇಂದು ನಾರಿಶಕ್ತಿಯಾಗಿ ಮಾತನಾಡುತ್ತಿದ್ದೇನೆ. ಸರ್ಕಾರಗಳ ಮೇಲೆ ನಂಬಿಕೆ ಇಡಬೇಡಿ. ಪ್ರತಿ 5 ವರ್ಷಕ್ಕೊಮ್ಮೆ ಸರ್ಕಾರ ಬರುತ್ತದೆ ಹೋಗುತ್ತದೆ. ಆದರೆ ಸಾಧು-ಸಂತರು ಬದಲಾಗುವುದಿಲ್ಲ. ಅವರನ್ನು ಕೊಲೆ ಮಾಡಲಾಗುವುದಿಲ್ಲ. ಏಕೆಂದರೆ ಅವರು ಸತ್ತ ಮೇಲೆ ಸಾಧುಗಳಾಗುತ್ತಾರೆ ಎಂದು ತಿಳಿಸಿದ್ದಾರೆ.
Post a Comment