ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದ ಜಲಂಧರ್ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್(77) ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾಗ ಹೃದಯಾಘಾತವಾಗಿ ಸಂತೋಖ್ ಸಿಂಗ್ ಅಸ್ವಸ್ಥರಾಗಿದ್ದರು.
ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದ ಜಲಂಧರ್ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್(77) ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾಗ ಹೃದಯಾಘಾತವಾಗಿ ಸಂತೋಖ್ ಸಿಂಗ್ ಅಸ್ವಸ್ಥರಾಗಿದ್ದರು.
ಈ ವೇಳೆ ಅವರನ್ನು ಲೂದಿಯಾನದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಸಂಸದ ಸಂತೋಖ್ ಸಿಂಗ್ ಚೌಧರಿ ಸಾವನ್ನಪ್ಪಿದ್ದಾರೆ. ಪಂಜಾಬ್ನ ಲೂದಿಯಾನದಲ್ಲಿ ನಡೆಯುತ್ತಿದ್ದ ಯಾತ್ರೆ ವೇಳೆ ಘಟನೆ ನಡೆದಿದ್ದು ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಂತೋಖ್ ಸಿಂಗ್ ನಿಧನಕ್ಕೆ ರಾಹುಲ್ ಗಾಂಧಿ,ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸಂತಾಪ ಸೂಚಿಸಿದ್ದಾರೆ.
ಜಲಂಧರ್ ಜಿಲ್ಲೆಯ ಫಿಲ್ಲೌರ್ ಪ್ರದೇಶದ ಮೂಲಕ ಯಾತ್ರೆ ಸಾಗುತ್ತಿದ್ದಾಗ ದುರಂತ ಸಂಭವಿಸಿದೆ. ಫಿಲೌರ್ ವಿಧಾನಸಭಾ ಕ್ಷೇತ್ರವನ್ನು ಸಂತೋಖ್ ಸಿಂಗ್ ಚೌಧರಿ ಅವರ ಪುತ್ರ ವಿಕ್ರಮಜಿತ್ ಚೌಧರಿ ಪ್ರತಿನಿಧಿಸುತ್ತಿದ್ದಾರೆ. 2014 ಮತ್ತು 2019ರಲ್ಲಿ ಎರಡು ಬಾರಿ ಲೋಕಸಭೆ ಚುನಾವಣೆಯಲ್ಲಿ ಸಂತೋಷ್ ಸಿಂಗ್ ಗೆದ್ದಿದ್ದರು.
ಸಂಸದ ಸಂತೋಖ್ ಸಿಂಗ್ ರಾಹುಲ್ ಗಾಂಧಿ ಅವರೊಂದಿಗೆ ಕುಶ್ತ್ ಆಶ್ರಮದಿಂದ ಹೊರಬಂದಾಗ ಕುಸಿದು ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ತಕ್ಷಣ ಅವರನ್ನು ಆಂಬ್ಯುಲೆನ್ಸ್ನಲ್ಲಿ ವಿರ್ಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಭಾರತ್ ಜೋಡೋ ಯಾತ್ರೆ ಸದ್ಯ ಸ್ಥಗಿತಗೊಂಡಿದೆ.
Post a Comment