ಶಿವಾಜಿ ಮಹಾರಾಜರ ವಿರುದ್ಧ ನಿಂದನೀಯ ಪೋಸ್ಟ್‌; ವಿಜಯಪುರ ಪಟ್ಟಣದಲ್ಲಿ ಪರಿಸ್ಥಿತಿ ಉದ್ವಿಗ್ನ

 ಐತಿಹಾಸಿಕ ವ್ಯಕ್ತಿ ಶಿವಾಜಿ ಮಹಾರಾಜರ ಕುರಿತ ಅವಹೇಳನಕಾರಿ ಪೋಸ್ಟ್ ಅನ್ನು ಖಂಡಿಸಿ ರಾಜ್ಯದ ವಿಜಯಪುರ ಜಿಲ್ಲೆಯಲ್ಲಿ ಮಂಗಳವಾರ ಹಿಂದೂ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದರಿಂದ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. 

                                       ಛತ್ರಪತಿ ಶಿವಾಜಿ ಪ್ರತಿಮೆ (ಸಂಗ್ರಹ ಚಿತ್ರ)

By : Rekha.M

ವಿಜಯಪುರ: ಐತಿಹಾಸಿಕ ವ್ಯಕ್ತಿ ಶಿವಾಜಿ ಮಹಾರಾಜರ ಕುರಿತ ಅವಹೇಳನಕಾರಿ ಪೋಸ್ಟ್ ಅನ್ನು ಖಂಡಿಸಿ ರಾಜ್ಯದ ವಿಜಯಪುರ ಜಿಲ್ಲೆಯಲ್ಲಿ ಮಂಗಳವಾರ ಹಿಂದೂ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದರಿಂದ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. 

ಸ್ಥಳೀಯರ ಪ್ರಕಾರ, ಸೋಮವಾರ ತಡರಾತ್ರಿ ಶಿವಾಜಿ ಮಹಾರಾಜರ ಮೇಲೆ ನಿಂದನಾತ್ಮಕ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದ್ದು, ಕೆಲವೇ ಸಮಯದಲ್ಲಿ ಅದು ವೈರಲ್ ಆಗಿದೆ. ಪೋಸ್ಟ್ ಅನ್ನು ಎಲ್ಲರೂ ಖಂಡಿಸಿದ್ದಾರೆ.

ಪೊಲೀಸರ ಪ್ರಕಾರ, ದುಷ್ಕರ್ಮಿಯನ್ನು ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದ ನಿವಾಸಿ ಅಮೀನ್ ಬಂಡಾರಕವಟೆ ಎಂದು ಗುರುತಿಸಲಾಗಿದೆ. ಘಟನೆ ಖಂಡಿಸಿ ಚಡಚಣ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲು ಸ್ಥಳೀಯರು ನಿರ್ಧರಿಸಿದ್ದಾರೆ.

ಆರೋಪಿಯನ್ನು ಕೂಡಲೇ ಬಂಧಿಸುವಂತೆ ಹಿಂದೂ ಕಾರ್ಯಕರ್ತರು ಪೊಲೀಸರನ್ನು ಒತ್ತಾಯಿಸಿದ್ದಾರೆ. ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ನಮಗೆ ಇದುವರೆಗೆ ಯಾವುದೇ ದೂರು ಬಂದಿಲ್ಲ ಮತ್ತು ಈ ಬಗ್ಗೆ ಹಿರಿಯ ಅಧಿಕಾರಿಗಳ ನಿರ್ದೇಶನಕ್ಕಾಗಿ ಕಾಯುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.



Post a Comment

Previous Post Next Post