ಕೋಲಾರ: ಕರ್ನಾಟಕದ ಹೈಕೋರ್ಟಿನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ನಾರಾಯಣಸ್ವಾಮಿ ಹಾಗೂ ವೆಂಕಟರತ್ನಮ್ಮ ಅವ್ರ್ ಏಕೈಕ ಪುತ್ರಿ ಏನ್.ಗಾಯತ್ರಿ ಅವ್ರು ಆಯ್ಕೆಯಾಗಿ ಇಡೀ ತಾಲೂಕಿಗೆ ಕೀರ್ತಿ ತಂದಿದ್ದಾರೆ.
ಎನ್.ಗಾಯತ್ರಿ ಅವರು 2021 ರಲ್ಲಿ ಕಾನೂನು ಪದವಿ ಪಡೆದುಕೊಂಡಿದ್ದಾರೆ.ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಪ್ರಯತ್ನದ ಮೂಲಕ 25 ನೇ ವಯಸ್ಸಿಗೆ ನ್ಯಾಯಾಧೀಶೆಯಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಹೈಕೋರ್ಟ್ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.ಇದೀಗ ಫಲಿತಾಂಶ ಪ್ರಕಟಗೊಂಡಿದ್ದು, ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ.
ಬಡತನ ಹಿನ್ನೆಲೆಯಿಂದ ಬಂದ ಗಾಯತ್ರಿ ಅವರು , ಬಂಗಾರಪೇಟೆ ತಾಲೂಕಿನ ಕಾರಹಳ್ಳಿಯ ಸರ್ಕಾರೀ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಆರಂಭಿಸಿ, ಮಾಧ್ಯಮಿಕ, ಪಿಯು ಶಿಕ್ಷಣ ಪಡೆದುಕೊಂಡಿದ್ದಾರೆ.ನಂತರ ಕೋಲಾರದ ಮಹಿಳಾ ಕಾಲೇಜಿನಲ್ಲಿ ಬಿಕಾಂ ಪದವಿಯನ್ನು ಮುಗಿಸಿದ್ದಾರೆ. ಬಳಿಕ ಕೆಜಿಎಫ್ ನ ಕೆಂಗೆಲ್ ಹನುಮಂತಯ್ಯ ಕಾನೂನು ಕಾಲೇಜಿನಲ್ಲಿ ಪದವಿ ಪೂರೈಸಿ, ಕರ್ನಾಟಕಕ್ಕೆ 4 ನೇ ರ್ಯಾನ್ಕ್ ಪಡೆದಿದ್ದಾರೆ. ಶಿಕ್ಷಣ ಮುಗಿದ ಬಳಿಕ ವಕೀಲರಾದ ಶಿವಸುಬ್ರಮ್ಮಣ್ಯ ಬಳಿ ಎನ್. ಗಾಯತ್ರಿ ಅವರು ಜೂನಿಯರ್ ವಕೀಲರಾಗಿ ವೃತ್ತಿ ಮಾಡುತ್ತಿದ್ದರು. ಇದೀಗ ಎರಡನೇ ಪ್ರಯತ್ನದಲ್ಲಿ ನೂತನ ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆಯಾಗಿದ್ದಾರೆ.
ಎನ್.ಗಾಯತ್ರಿ ಅವರು ಮೂಲತಃ ಯಲಬುರ್ಗಿ ಗ್ರಾಮದವರಾಗಿದ್ದು, ಕಾರಹಳ್ಳಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ನಾರಾಯಣಸ್ವಾಮಿ ಹಾಗೂ ವೆಂಕಟರತ್ನಮ್ಮ ಅವರ ಏಕೈಕ ಪುತ್ರಿಯಾಗಿದ್ದಾರೆ. ತಂದೆ ನಾರಾಯಣ ಅವರು ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದಾರೆ. ಬಡತನದಲ್ಲೇ ಸಾಧಿಸಬೇಕೆಂಬ ಛಲದಲ್ಲಿ ಎನ್.ಗಾಯತ್ರಿ ಅವರು ಯಶಸ್ವಿಯಾಗಿದ್ದಾರೆ. ತಂದೆ, ತಾಯಿ, ಸಹಪಾಠಿಗಳು ಹಾಗೂ ಗ್ರಾಮಸ್ಥರು ಸಂತಸ ವ್ಯಕ್ತ ಪಡಿಸಿದ್ದಾರೆ.
إرسال تعليق