ಆ್ಯಸಿಡ್ ದಾಳಿ ಸಂತ್ರಸ್ತರ ಪರಿಹಾರ ಮೊತ್ತ ರೂ.10 ಲಕ್ಷಕ್ಕೆ ಏರಿಕೆ: ಸಚಿವ ಹಾಲಪ್ಪ ಆಚಾರ್‌

 ಮಹಿಳೆಯರ ಮೇಲಿನ ಅಪರಾಧಗಳನ್ನು ತಡೆಯಲು ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಆ್ಯಸಿಡ್ ಸಂತ್ರಸ್ತರಿಗೆ ನೀಡುತ್ತಿರುವ ಪರಿಹಾರವನ್ನು 10 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಗಣಿ ಮತ್ತು ಭೂವಿಜ್ಞಾನ ಸಚಿವ ಹಾಲಪ್ಪ ಆಚಾರ್ ಅವರು ಮಂಗಳವಾರ ಹೇಳಿದರು.

                                                               ಹಾಲಪ್ಪ ಆಚಾರ್

By : Rekha.M
Online Desk

ಬೆಂಗಳೂರು: ಮಹಿಳೆಯರ ಮೇಲಿನ ಅಪರಾಧಗಳನ್ನು ತಡೆಯಲು ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಆ್ಯಸಿಡ್ ಸಂತ್ರಸ್ತರಿಗೆ ನೀಡುತ್ತಿರುವ ಪರಿಹಾರವನ್ನು 10 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಗಣಿ ಮತ್ತು ಭೂವಿಜ್ಞಾನ ಸಚಿವ ಹಾಲಪ್ಪ ಆಚಾರ್ ಅವರು ಮಂಗಳವಾರ ಹೇಳಿದರು.

ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಎಂಎಲ್ ಸಿ ಸಲೀಂ ಅಹಮದ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆ್ಯಸಿಡ್ ಸಂತ್ರಸ್ತರ ಪರಿಹಾರವನ್ನು 3 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕನಕಪುರದಲ್ಲಿ ಇತ್ತೀಚೆಗೆ ವರದಿಯಾದ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಅಧಿಕಾರಿಗಳು ಕ್ಷಿಪ್ರ ಕ್ರಮ ಕೈಗೊಂಡಿದ್ದು, ಬಾಲಕಿ ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಿರುವುದಾಗಿ ಸಚಿವರು ತಿಳಿಸಿದರು.

ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಳ್ಳುತ್ತಿದ್ದು, ಸಂತ್ರಸ್ತರಿಗೆ ವೃತ್ತಿಪರ ತರಬೇತಿ ನೀಡುವ ಮೂಲಕ ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ನಿರ್ಭಯ ಯೋಜನೆಯಡಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಮಾಜ ಕಲ್ಯಾಣ ಇಲಾಖೆಯು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಆತ್ಮರಕ್ಷಣೆ ತರಬೇತಿ ನೀಡುತ್ತಿದೆ ಎಂದರು.

ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳನ್ನು ಇಲಾಖೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಮಕ್ಕಳಲ್ಲಿ ಅಪೌಷ್ಟಿಕತೆ ಶೇಕಡಾ 50 ರಷ್ಟು ಕಡಿಮೆಯಾಗಿದೆ ಎಂದು ತಿಳಿಸಿದರು.


Post a Comment

Previous Post Next Post