ಸಂಸ್ಥೆಯ ಆದಾಯ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಿರುವ ಬಿಎಂಟಿಸಿ, ದಂಡದ ರೂಪದಲ್ಲಿ ಜನವರಿ ಒಂದೇ ತಿಂಗಳಿನಲ್ಲಿ 6.77 ಲಕ್ಷ ರುಪಾಯಿಗಳನ್ನು ಸಂಗ್ರಹಿಸಿದೆ.
ಸಂಗ್ರಹ ಚಿತ್ರಬೆಂಗಳೂರು: ಸಂಸ್ಥೆಯ ಆದಾಯ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಿರುವ ಬಿಎಂಟಿಸಿ, ದಂಡದ ರೂಪದಲ್ಲಿ ಜನವರಿ ಒಂದೇ ತಿಂಗಳಿನಲ್ಲಿ 6.77 ಲಕ್ಷ ರುಪಾಯಿಗಳನ್ನು ಸಂಗ್ರಹಿಸಿದೆ.
ಬಿಎಂಟಿಸಿ ಸಂಸ್ಥೆಯ ತನಿಖಾ ತಂಡಗಳು 2023ರ ಜನವರಿ ತಿಂಗಳಿನಲ್ಲಿ ಒಟ್ಟು 16,226 ಟ್ರಿಪ್‌ಗಳನ್ನು ತಪಾಸಣೆ ಮಾಡಿದ್ದು, ಈ ವೇಳೆ 3591 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಮಾಡಿದೆ. ಇದರಿಂದ ಒಟ್ಟು ರೂ. 6,77,190 ದಂಡ ವಸೂಲಿಯಾಗಿದೆ. ಸಂಸ್ಥೆಯ ನಿರ್ವಾಹಕರ ವಿರುದ್ಧ 1,521 ಪ್ರಕರಣಗಳ ದಾಖಲಾಗಿದೆ.
ಮೋಟಾರು ವಾಹನ ಕಾಯ್ದೆ 1988ರ ಕಾಲಂ177 ಮತ್ತು 94 ರ ಪ್ರಕಾರ ದಂಡ ವಸೂಲಿ ಮಾಡಲಾಗಿದ್ದು, ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 322 ಪುರುಷ ಪ್ರಯಾಣಿಕರಿಂದ ಒಟ್ಟು 32,200 ರೂ ಸಂಗ್ರಹವಾಗಿದೆ.
ಪ್ರಯಾಣಿಕರು ಬಿಎಂಟಿಸಿ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೇಟ್ ದಿನದ ಪಾಸು / ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸಬೇಕಿದೆ. ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದು. ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗಲಿದೆ.
ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಜಾಗದಲ್ಲಿ ಮಹಿಳೆಯರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕೆಂದು ಬಿಎಂಟಿಸಿಯಿಂದ ಪ್ರಕಟಣೆ ತಿಳಿಸಿದೆ.
إرسال تعليق