ವಾಣಿಜ್ಯ ನಗರಿ ಮುಂಬೈನಲ್ಲಿ ಮಂಗಳವಾರ ಸಂಜೆ ನಡೆದ ಶಿವಸೇನೆಯ ಮೊದಲ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಪಕ್ಷದ ಮುಖ್ಯಸ್ಥರಾಗಿ ಮುಂದುವರೆಸಲು ತೀರ್ಮಾನಿಸಲಾಯಿತು
ಏಕನಾಥ್ ಶಿಂಧೆ
ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಮಂಗಳವಾರ ಸಂಜೆ ನಡೆದ ಶಿವಸೇನೆಯ ಮೊದಲ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಪಕ್ಷದ ಮುಖ್ಯಸ್ಥರಾಗಿ ಮುಂದುವರೆಸಲು ತೀರ್ಮಾನಿಸಲಾಯಿತು
ಸಭೆಯಲ್ಲಿ ಅಂಗೀಕರಿಸಿದ ನಿರ್ಣಯಗಳ ಕುರಿತು ರಾಜ್ಯ ಕೈಗಾರಿಕಾ ಸಚಿವ ಉದಯ್ ಸಾಮಂತ್ ಘೋಷಿಸಿದರು. ಭಾರತೀಯ ಚುನಾವಣಾ ಆಯೋಗ ಕಳೆದ ವಾರ ಶಿಂಧೆ ಬಣವನ್ನು ನಿಜವಾದ ಶಿವಸೇನೆ ಎಂದು ಗುರುತಿಸಿತು ಮತ್ತು ಪಕ್ಷದ ಚುನಾವಣಾ ಚಿಹ್ನೆಯಾದ ಬಿಲ್ಲು ಮತ್ತು ಬಾಣವನ್ನು ಅವರಿಗೆ ನೀಡಿತು.
ಶಿಂಧೆ ಮತ್ತು ಮಾಜಿ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಪ್ರತಿಸ್ಪರ್ಧಿ ಬಣಗಳು ಶಿವಸೇನೆಯ ನಿಯಂತ್ರಣಕ್ಕಾಗಿ ಕಾನೂನು ಹೋರಾಟದಲ್ಲಿ ತೊಡಗಿವೆ. ಶಿವಸೇನೆಯ ಮುಖ್ಯ ನಾಯಕ, ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ಸಭೆ ನಡೆದಿದ್ದು, ಶಿಸ್ತು ಸಮಿತಿಯನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ಸಾಮಂತ್ ಹೇಳಿದರು.
ಸ್ವಾತಂತ್ರ್ಯ ಹೋರಾಟಗಾರ ಮತ್ತು ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ಬೇಡಿಕೆ ಸೇರಿದಂತೆ ಮತ್ತಿತರ ನಿರ್ಣಯಗಳನ್ನು ಅಂಗೀಕರಿಸಲಾಯಿತು ಎಂದು ಅವರು ತಿಳಿಸಿದರು.
إرسال تعليق