ಶಿವಮೊಗ್ಗ: ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆ ಮುಚ್ಚಲು ಕೇಂದ್ರ ಸರ್ಕಾರದ ಹುನ್ನಾರ! ಜಿಲ್ಲಾ ಎನ್. ಎಸ್. ಯು. ಐ. ನಿಂದ ತೀವ್ರ ವಿರೋಧ ವ್ಯಕ್ತ ಪಡಿಸುವ ಮೂಲಕ ರಾಷ್ಟ್ರಪತಿಗಳಲ್ಲಿ ಮನವಿ.

 ಆಧುನಿಕ ಮೈಸೂರು ನಿರ್ಮಾತೃಗಳಲ್ಲೊಬ್ಬರಾದ ಸರ್.ಎಂ. ವಿಶ್ವೆಶ್ವರಯ್ಯನವರ ದೂರದೃಷ್ಟಿಯಿಂದ ಸ್ಥಾಪನೆಯಾಗಿದ್ದ ಭದ್ರಾವತಿಯ ವಿ. ಐ ಎಸ್.ಎಲ್. ಕಾರ್ಖಾನೆಯನ್ನು ಕೇಂದ್ರ ಸರ್ಕಾರ ಮುಚ್ಚಲು ಹುನ್ನಾರ ನಡೆಸಿರುವುದನ್ನು ಜಿಲ್ಲಾ ಎನ್.ಎಸ್.ಯು. ಐ ಖಂಡಿಸುತ್ತಿದೆ.  ವಿ. ಐ. ಎಸ್. ಎಲ್. ಕಾರ್ಖಾನೆಯು ಏಷ್ಯಾದಲ್ಲಿಯೇ ಉತ್ಕ್ರಷ್ಟ ಕಬ್ಬಿಣ ಮತ್ತು ಉಕ್ಕು ತಯಾರಿಕೆಗೆ ಪ್ರಸಿದ್ದಿ ಪಡೆದಿದ್ದು, ಕಾರ್ಖಾನೆಯ ಉತ್ಪನ್ನಗಳಿಗೆ ಬೇಡಿಕೆ ಮತ್ತು ಮಾರುಕಟ್ಟೆಯಿತ್ತು. ರಾಜ್ಯ ಸರ್ಕಾರದ ಸ್ವಾಮ್ಯದಲ್ಲಿದ್ದ ವಿಐಎಸ್ಎಲ್ ಅನ್ನು ಇನ್ನಷ್ಟು ಅಭಿವೃದ್ದಿ ಪಡಿಸುವ ಉದ್ದೇಶಕ್ಕೆ ಯಾವುದೇ ಷರತ್ತು ಇಲ್ಲದೇ ಕೇಂದ್ರ ಸರ್ಕಾರದ ಸೈಲ್ ಗೆ ವಹಿಸಿಕೊಡಲಾಗಿತ್ತು. ಸೈಲ್ ಕಾರ್ಖಾನೆ ಅಭಿವೃದ್ದಿ ಪಡಿಸುವ ಬದಲಿಗೆ ಕಾರ್ಖಾನೆಗೆ ಬೇಕಾದ ಅವಶ್ಯಕತೆಗಳನ್ನು ಪೂರೈಸದೇ ಇರುವುದರಿಂದ ಇಂದು ವಿಐಎಸ್ಎಲ್ ಕಾರ್ಖಾನೆಯನ್ನು ಮುಚ್ಚಲು ಮುಂದಾಗಿದೆ. ಇದನ್ನು ಜಿಲ್ಲಾ ಎನ್. ಎಸ್. ಯು. ಐ. ತೀವ್ರವಾಗಿ  ವಿರೋಧಿಸುತ್ತಿದೆ.

         ಎನ್ ಎಸ್ ಯು ಐ ವತಿಯಿಂದ ಭದ್ರವತಿಯ ವಿಐಎಸ್ಎಲ್ ಕಾರ್ಖಾನೆ ಪುನಶ್ಚೇತನಗೊಳಿಸಿ, ಸರ್ಕಾರಿ ಸ್ವಾಮ್ಯದಲ್ಲೇ                                                                                        ಮುಂದುವರೆಸಲು ಒತ್ತಾಯ.

ವಿಐಎಸ್ಎಲ್ ಕಾರ್ಖಾನೆ ಸಾವಿರಾರು ಕಾರ್ಮಿಕರಿಗೆ ಉದ್ಯೋಗ ನೀಡುವ ಮೂಲಕ ಈ ಭಾಗದ ಆರ್ಥಿಕ ಚಟಿವಟಿಕೆಗಳನ್ನು ಉತ್ತೇಜಿಸುತ್ತಲೇ ಬಂದಿದೆ. ಆದರೆ, ಕೇಂದ್ರ ಸರ್ಕಾರ ಸರ್ಕಾರಿ ಸ್ವಾಮ್ಯದ ಕಾರ್ಖಾನೆಗೆ ಗಣಿ ಒದಗಿಸುವಲ್ಲಿ ವಿಫಲವಾಗಿದ್ದು, ಕಾರ್ಖಾನೆ ನಷ್ಟದ ಹಾದಿ ಹಿಡಿಯಲು ಕಾರಣವಾಗಿದೆ. ಇದೀಗ ಕಾರ್ಖಾನೆಯನ್ನು ಮುಚ್ಚುವ ಪ್ರಯತ್ನ ನಡೆಸುತ್ತಿದ್ದು, ಇದರಿಂದ ಸಾವಿರಾರು ಕಾರ್ಮಿಕರಿಗೆ ಬೀದಿಗೆ ಬೀಳುತ್ತಿದ್ದಾರೆ. ಜಿಲ್ಲೆಯ ಆರ್ಥಿಕ ಚಟುವಟಿಕೆಯೂ  ಕುಸಿಯುತ್ತಿದೆ. ಇದಕ್ಕೆಲ್ಲ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವೇ ನೇರ ಹೊಣೆಯಾಗಿದೆ.ಇದರೊಂದಿಗೆ ಜಿಲ್ಲೆಯ ಮತ್ತೊಂದು ಕೈಗಾರಿಕೆ ಎಂಪಿಎಂ ಸಹ ಬಿಜೆಪಿ ಸರ್ಕಾರದ ಹೊಣೆಗೇಡಿತನದಿಂದಾಗಿ ಮುಚ್ಚಲಾಗಿದೆ. ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿಕೊಳ್ಳುತ್ತಲೇ ಅಧಿಕಾರಕ್ಕೆ ಬಂದ ಬಿಜೆಪಿ ಉದ್ಯೋಗ ಸೃಷ್ಟಿಸುವ ಬದಲು, ಸರ್ಕಾರಿ ಸ್ವಾಮ್ಯದ ಒಂದೊಂದೆ ಉದ್ಯಮಗಳನ್ನು ಮುಚ್ಚುತ್ತಾ ಮತ್ತಷ್ಟು ನಿರುದ್ಯೋಗ ಸೃಷ್ಟಿಗೆ ಕಾರಣಾವಾಗಿದೆ.

 ಗೌರವಾನ್ವಿತ ರಾಷ್ಟ್ರಪತಿಗಳು ಕೂಡಲೇ ಮಧ್ಯೆ ಪ್ರವೇಶಿಸಿ ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಿ, ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರೆಸುವಂತೆ ಸರ್ಕಾರಕ್ಕೆ ಆದೇಶ ನೀಡಬೇಕು. ಹಾಗೆಯೇ ಎಂಪಿಎಂ ಕಾರ್ಖಾನೆ ಪುನಶ್ಚೇತನಕ್ಕೂ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸುತ್ತಿದ್ದೇವೆ. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾದ ಎಚ್ ಎಸ್ ಸುಂದರೇಶ್, ಮಾಜಿಶಾಸಕರಾದ ಕೆ.ಬಿ ಪ್ರಸನ್ನ ಕುಮಾರ್, ಜಿಲ್ಲಾ ಉಪದ್ಯಾಕ್ಷರಾದ ಎಸ್. ಪಿ ದಿನೇಶ್, ರಾಜ್ಯ ವಕ್ತಾರರಾದ ರಮೇಶ್ ಹೆಗಡೆ, ರವಿಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ದೀಪಕ್ ನಿಹಾಲ್, ಆರಿಫ್, ಕಾಂಗ್ರೆಸ್ ಮುಖಂಡರುಗಳಾದ ಪ್ರಮೋದ್, ಅಕ್ಬರ್, ರಘು, ಚಂದನ್, ಉಪಸ್ಥಿತರಿದ್ದರು ಈ ಸಂದರ್ಭದಲ್ಲಿ ಎನ್ ಎಸ್ ಯು ಐ ನ ಅಧ್ಯಕ್ಷರಾದ ವಿಜಯಕುಮಾರ್ ಅವರು ಮಾತನಾಡಿ ವಿಐಎಸ್ ಎಲ್ ಉಳಿವಿಗೆ ಹೋರಾಡಿತ್ತಿರುವ ಕಾರ್ಮಿಕರ ಜೊತೆ ಎನ್.ಎಸ್.ಯು. ಐ ಸದಾ ಇರಲಿದೆ.

                                                                         ಸಂಗ್ರಹ ಚಿತ್ರಣ

ಕೂಡಲೇ ಸರ್ಕಾರ ವಿಐಎಸ್ಎಲ್  ಕಾರ್ಖಾನೆ ಉಳಿವಿಗೆ ಕ್ರಮ ಕೈಗೊಳ್ಳದಿದ್ದಲ್ಲಿ, ಎನ್. ಎಸ್. ಯು. ಐ ವತಿಯಿಂದ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಈ ಮೂಲಕ ಎಚ್ಚರಿಸುತ್ತಿದ್ದೇವೆ ಈ ಪ್ರತಿಭಟನೆಯಲ್ಲಿ ಎನ್. ಎಸ್.ಯು. ಐ ನ ರವಿ ಕಾಟಿಕೆರೆ, ಚರಣ್, ಹರ್ಷಿತ್, ವಿಕ್ರಂ, ರವಿ, ಚಂದ್ರು ಜಿ ರಾವ್, ತೌಫಿಕ್, ಹೇಮಂತ್, ಚರಣ್, ದೀಕ್ಷೀತ್ ಪ್ರದೀಪ್, ವರುಣ್ ವಿ ಪಂಡಿತ್, ನಾಗೇಂದ್ರ, ಸಾಗರ್, ಹಾಗೂ ಯುವ ಕಾಂಗ್ರೆಸ್ ನ ಆಕಾಶ್, ಗೌತಮ್ ನೂರಾರು ಯುವಕರು ಪಾಲ್ಗೊಂಡಿದ್ದರು.

  



Post a Comment

Previous Post Next Post