ಬೆಂಗಳೂರು: ಜೆಡಿಎಸ್ ತನ್ನ ಪಂಚರತ್ನ ಯಾತ್ರೆಯ ಸಮಾರೋಪ ಕಾರ್ಯಕ್ರಮಕ್ಕೂ ಮುನ್ನ ಮಾರ್ಚ್ 26 ರಂದು ಬೆಂಗಳೂರಿನ ಕುಂಬಳಗೋಡಿನಿಂದ ಮೈಸೂರಿನವರೆಗೆ 100 ಕಿಲೋಮೀಟರ್ ತೆರೆದ ವ್ಯಾನ್‌ನಲ್ಲಿ ಪಕ್ಷದ ವರಿಷ್ಠ ಎಚ್‌ಡಿ ದೇವೇಗೌಡರನ್ನು ಕರೆದುಕೊಂಡು ಹೋಗಲಿದೆ.
ಮಂಗಳವಾರವಷ್ಟೇ ಗೌಡರು ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಶನಿವಾರ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.
ಹತ್ತು ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆಯಿರುವುದರಿಂದ ಮೈಸೂರು ರ‍್ಯಾಲಿ ಇತಿಹಾಸ ಸೃಷ್ಟಿಸಲಿದೆ ಎಂದು ಪಕ್ಷದ ಹಿರಿಯ ಮುಖಂಡ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇದು ನನ್ನ ರಾಜಕೀಯ ಜೀವನದ ಇತಿಹಾಸದಲ್ಲಿಯೇ ಮಹೋನ್ನತ ಸಮಾವೇಶ ಆಗಲಿದೆ. ಈವರೆಗೂ ಯಾರೂ ಮಾಡಿರದಂಥ ಸಮಾವೇಶ ಅದಾಗಿರುತ್ತದೆ ಎಂದರು.
ಕುಂಬಳಗೋಡಿನಿಂದ ಪ್ರಾರಂಭವಾಗಿ ಮೈಸೂರಿನವರೆಗೆ ಸುಮಾರು 100 ಕೀ.ಮೀ ದೂರ ಬೃಹತ್ ರೋಡ್ ಶೋ ಮಾಡಲಾಗುವುದು. ಆ ರೋಡ್‌ಶೋದಲ್ಲಿ ಮಾಜಿ ಪ್ರಧಾನಿಗಳಾದ ಎಚ್.ಡಿ. ದೇವೇಗೌಡರನ್ನು ತೆರೆದ ವಾಹನದಲ್ಲಿ ಕರೆದುಕೊಂಡು ಹೋಗಲಾಗುವುದು. ಈ ಸಮಾವೇಶದಲ್ಲಿ ಹತ್ತು ಲಕ್ಷ ಜನ ಸೇರಲಿದ್ದಾರೆ. ಇದೊಂದು ಐತಿಹಾಸಿಕ ಸಮಾವೇಶ ಆಗಲಿದೆ ಎಂದರು.
Post a Comment