ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಶಂಕಿತ ಉಗ್ರ ಶಾರಿಕ್ 10 ದಿನ ಎನ್ಐಎ ವಶಕ್ಕೆ

 

                                                                     ಶಂಕಿತ ಉಗ್ರ ಶಾರಿಕ್

By : Rekha.M
Online Desk

ಮಂಗಳೂರು: ಮಂಗಳೂರು ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ಮಾರ್ಚ್ 15ರವರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಕಸ್ಟಡಿಗೆ ನೀಡಲಾಗಿದೆ.

ಸ್ಫೋಟದಲ್ಲಿ ಗಂಭೀರ ಸುಟ್ಟು ಗಾಯಗೊಂಡಿದ್ದ ಶಂಕಿತ ಉಗ್ರ ಶಾರಿಕ್ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಎರಡೂವರೆ ತಿಂಗಳ ಬಳಿಕ ಇಂದು ಆತ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು ಡಿಸ್ಚಾರ್ಜ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಶಾರಿಕ್ ನನ್ನು ಎನ್ಐಎ ಬೆಂಗಳೂರಿನ ವಿಶೇಷ ಎನ್ಐಎ ಕೋರ್ಟ್ ಮುಂದೆ ಹಾಜರುಪಡಿಸಿದ್ದು ಆತನನ್ನು 10 ದಿನಗಳ ಎನ್ಐಎ ಕಸ್ಟಡಿಗೆ ನೀಡಿದೆ.

2022ರ ನವೆಂಬರ್ 19ರಂದು ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಕೈಯಲ್ಲಿದ್ದ ಕುಕ್ಕರ್ ಬಾಂಬ್ ಸ್ಫೋಟಗೊಂಡು ಶಾರಿಕ್ ಗಾಯಗೊಂಡಿದ್ದನು. ಆತನೊಂದಿಗೆ ಆಟೋ ರಿಕ್ಷಾ ಚಾಲಕನೂ ಗಾಯಗೊಂಡಿದ್ದು, ಆರೋಪಿಗೆ ಶೇ 40ರಷ್ಟು ಸುಟ್ಟ ಗಾಯಗಳಾಗಿತ್ತು.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಶಾರಿಕ್, ಭಯೋತ್ಪಾದಕ ಸಂಘಟನೆಯಾದ ಇಸ್ಲಾಮಿಕ್ ಸ್ಟೇಟ್‌ನಿಂದ ಪ್ರೇರಿತನಾಗಿದ್ದನು ಮತ್ತು ಶಿವಮೊಗ್ಗ ಪಟ್ಟಣದಲ್ಲಿ ಇದೇ ರೀತಿಯ ಐಎಸ್ ನೆಲೆಯನ್ನು ಸ್ಥಾಪಿಸಲು ಯೋಜಿಸುತ್ತಿದ್ದನು ಎನ್ನಲಾಗಿದೆ.

ಈ ಮಧ್ಯೆ, ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ISIS ಉಗ್ರ ಸಂಘಟನೆ ಕೊನೆಗೂ ಸ್ಫೋಟದ ಹೊಣೆ ಹೊತ್ತಿದೆ. ಐಸಿಸ್​ ಸಂಘಟನೆಯ ವಕ್ತಾರ ಐಎಸ್​​ಕೆಪಿ (ಇಸ್ಲಾಮಿಕ್ ಸ್ಟೇಟ್ಸ್ ಕೊರಸನ್ ಪ್ರಾವಿನ್ಸ್​​) ನಡೆಸುವ ವಾಯ್ಸ್ ಆಫ್ ಕೂರಸ ನಿಯತಕಾಲಿಕೆಯಲ್ಲಿ ಕರ್ನಾಟಕದ ಮಂಗಳೂರು ಮತ್ತು ತಮಿಳುನಾಡಿನ ಕೊಯಮತ್ತೂರು ಸ್ಪೋಟದ ಹೊಣೆ ಹೊತ್ತಿರುವ ಕುರಿತಾಗಿ ಪ್ರಕಟಿಸಲಾಗಿದೆ.



    Post a Comment

    Previous Post Next Post