ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ರ‍್ಯಾಗಿಂಗ್ ನಿಂದ ಬೇಸತ್ತ 7ನೇ ತರಗತಿಯ ವಿದ್ಯಾರ್ಥಿನಿ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವೈಷ್ಣವಿ
ಮಡಿಕೇರಿ: ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ರ‍್ಯಾಗಿಂಗ್ ನಿಂದ ಬೇಸತ್ತ 7ನೇ ತರಗತಿಯ ವಿದ್ಯಾರ್ಥಿನಿ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶಿವರಹಳ್ಳಿ ಗ್ರಾಮದ ಜಿತೇಂದ್ರ-ಅಕ್ಷತಾ ದಂಪತಿಯ ಪುತ್ರಿ ವೈಷ್ಣವಿ (13) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಸೊಮವಾರಪೇಟೆಯ ಖಾಸಗಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ವೈಷ್ಣವಿಗೆ ಕಳೆದ ಒಂದು ವಾರದ ಹಿಂದೆ ರ‍್ಯಾಗಿಂಗ್ ಮಾಡಲಾಗಿತ್ತು, ಇದರಿಂದ ಖಿನ್ನತೆಗೊಳಗಾಗಿದ್ದ ಆಕೆ ಶನಿವಾರ ರಾತ್ರಿ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ .
ರ‍್ಯಾಗಿಂಗ್ ಬಗ್ಗೆ ಪೋಷಕರಿಗೆ ವಿಷಯ ತಿಳಿಸಿದ್ದ ವೈಷ್ಣವಿ ಶಾಲೆಯಲ್ಲಿ ಈ ಬಗ್ಗೆ ಯಾರಿಗೂ ಮಾಹಿತಿ ನೀಡಿರಲಿಲ್ಲ ಎಂದು ತಿಳಿದು ಬಂದಿದೆ. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.
إرسال تعليق