ಹಿಂದೂ ಧರ್ಮ, ಸಾಹಿತ್ಯ ಇತ್ಯಾದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುವ ನಟ ಚೇತನ್ ಅಹಿಂಸ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ಚೇತನ್ ನನ್ನು ಕರೆದೊಯ್ಯುತ್ತಿರುವ ಪೊಲೀಸರು
ಬೆಂಗಳೂರು: ಹಿಂದೂ ಧರ್ಮ, ಸಾಹಿತ್ಯ ಇತ್ಯಾದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುವ ನಟ ಚೇತನ್ ಅಹಿಂಸ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದರು ಎಂದು ಶಿವಕುಮಾರ್ ಎಂಬುವವರು ನೀಡಿದ ದೂರಿನಡಿ ನಟ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿ ಎಫ್ಐಆರ್ ದಾಖಲಿಸಿದ್ದಾರೆ.
ನಟ ಚೇತನ್ ಅಹಿಂಸ ವಿರುದ್ಧ ಹಿಂದೂಪರ ಸಂಘಟನೆ ದೂರು ನೀಡಿತ್ತು. ಈಗ ಪೊಲೀಸರು ನಟ ಚೇತನ್‌ನನ್ನು ಕೋರ್ಟ್‌ಗೆ ಹಾಜರುಪಡಿಸಿದ್ದಾರೆ. ಐಪಿಸಿ ಸೆಕ್ಷನ್ 295A 505Bರಡಿ ಪ್ರಕರಣ ದಾಖಲಾಗಿದೆ. ಚೇತನ್ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ. ಜಾಮೀನು ಕೋರಿ ಚೇತನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ.
ಸಾವರ್ಕರ್ ಹೇಳಿಕೆ: ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು- ಇದು ಒಂದು ಸುಳ್ಳು
1992ರಲ್ಲಿ: ಬಾಬರಿ ಮಸೀದಿ ರಾಮನ ಜನ್ಮಭೂಮಿ-ಇದು ಒಂದು ಸುಳ್ಳು
ಈಗ 2023ರಲ್ಲಿ: ಉರಿಗೌಡ, ನಂಜೇಗೌಡರು ಟಿಪ್ಪುವನ್ನು ಕೊಂದರು-ಇದು ಕೂಡ ಒಂದು ಸುಳ್ಳು
ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು-ಸತ್ಯವೇ ಸಮಾನತೆ
ಕಳೆದ ವರ್ಷ ಫೆಬ್ರವರಿಯಲ್ಲಿ ಕೂಡ ನಟ ಚೇತನ್ ಮಾಡಿದ್ದ ಒಂದು ಟ್ವೀಟ್ ಹಿನ್ನೆಲೆಯಲ್ಲಿ ಅರೆಸ್ಟ್ ಆಗಿದ್ದರು. ಹಿಜಾಬ್ ವಿಚಾರವನ್ನು ಪ್ರಸ್ತಾಪಿಸುತ್ತಾ ಹೈಕೋರ್ಟ್ ಜಡ್ಜ್ ಒಬ್ಬರ ವಿರುದ್ಧ ಅಕ್ಷೇಪಾರ್ಹ ವ್ಯಾಖ್ಯಾನ ಮಾಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಿ ನಂತರ ಬಿಡುಗಡೆ ಮಾಡಲಾಗಿತ್ತು.
Post a Comment