ಕರ್ನಾಟಕ ಸೇರಿ ದೇಶದ ಏಳು ರಾಜ್ಯಗಳಲ್ಲಿ ‘ಪಿಎಂ ಮಿತ್ರ ಮೆಗಾ ಟೆಕ್ಸ್‌ಟೈಲ್ ಪಾರ್ಕ್’ಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಘೋಷಣೆ ಮಾಡಿದ್ದು, ಕಲಬುರಗಿಯಲ್ಲಿ ನಿರ್ಮಾಣವಾಗುವ ಮೆಗಾ ಟೆಕ್ಸ್‌ಟೈಲ್ ಪಾರ್ಕ್‌ನಿಂದ 1 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಹೇಳಲಾಗುತ್ತಿದೆ.
ಜವಳಿ ಪಾರ್ಕ್ ಸ್ಥಾಪನೆಗೆ ಸ್ಥಳ ಪರಿಶೀಲನೆ ನಡೆಸುತ್ತಿರುವ ಸಂಸದ ಉಮೇಶ್ ಜಾಧವ್.
ಕಲಬುರಗಿ: ಕರ್ನಾಟಕ ಸೇರಿ ದೇಶದ ಏಳು ರಾಜ್ಯಗಳಲ್ಲಿ ‘ಪಿಎಂ ಮಿತ್ರ ಮೆಗಾ ಟೆಕ್ಸ್‌ಟೈಲ್ ಪಾರ್ಕ್’ಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಘೋಷಣೆ ಮಾಡಿದ್ದು, ಕಲಬುರಗಿಯಲ್ಲಿ ನಿರ್ಮಾಣವಾಗುವ ಮೆಗಾ ಟೆಕ್ಸ್‌ಟೈಲ್ ಪಾರ್ಕ್‌ನಿಂದ 1 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿ, 5ಎಫ್ (ಫಾರ್ಮ್-ಫೈಬಲ್-ಫ್ಯಾಕ್ತರಿ-ಫ್ಯಾಷನ್-ಫಾರಿನ್) ) ಯೋಜನೆಗೆ ಅನುಗುಣವಾಗಿ ಜವಳಿ ಕ್ಷೇತ್ರವನ್ನು ಉತ್ತೇಜಿಸುವ ಜೊತೆಗೆ ಸ್ಥಳೀಯ ಪೂರಕ ಕೈಗಾರಿಕೆಗಳಿಗೂ ಇದು ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಿದ್ದಾರೆ.
ಕಲಬುರಗಿ ಸಂಸದ ಡಾ ಉಮೇಶ್ ಜಾಧವ್ ಅವರು ಮಾತನಡಿ, "ಈ ಮೆಗಾ ಟೆಕ್ಸ್‌ಟೈಲ್ ಪಾರ್ಕ್‌ನಿಂದ 1 ಲಕ್ಷಕ್ಕೂ ಹೆಚ್ಚು ಜನರು ನೇರ ಉದ್ಯೋಗವನ್ನು ಪಡೆಯುತ್ತಾರೆ" ಎಂದು ತಿಳಿಸಿದ್ದಾರೆ.
ಮೂಲಗಳ ಪ್ರಕಾರ, ಮಾರ್ಚ್ 24 ರಂದು ಬೆಂಗಳೂರಿನ ವಿಧಾನಸೌಧದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಲ್ಲಾ ರಾಜ್ಯಗಳ 7 ಪಿಎಂ ಮಿತ್ರಾ ಮೆಗಾ ಟೆಕ್ಸ್‌ಟೈಲ್ ಪಾರ್ಕ್‌ಗಳಿಗೆ ಧ್ವಜಾರೋಹಣ ನೆರವೇರಿಸಲಿದ್ದಾರೆಂದು ತಿಳಿದುಬಂದಿದೆ.
ಮೆಗಾ ಟೆಕ್ಸ್‌ಟೈಲ್ ಪಾರ್ಕ್ ಕಲಬುರಗಿಯಲ್ಲಿ ಅಗತ್ಯವಾದ ಮೂಲಸೌಕರ್ಯಗಳಿವೆ. ಶಾಖೋತ್ಪನ್ನ ವಿದ್ಯುತ್ ಸ್ಥಾವರ ಸ್ಥಾಪನೆಗಾಗಿ ಹೊನ್ನ ಕಿರಣಗಿ ಮತ್ತು ನಡಿಸಿನ್ನೂರ ಗ್ರಾಮಗಳಲ್ಲಿ 1,560 ಎಕರೆಯನ್ನು ಸರ್ಕಾರ ಬಹಳ ಹಿಂದೆಯೇ ಸ್ವಾಧೀನಪಡಿಸಿಕೊಂಡಿತ್ತು. ಆದರೆ, ಪ್ರಸ್ತಾವನೆ ಕೈಬಿಟ್ಟು ಅಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸಲು ಮುಂದಾಗಿತ್ತು.
ಬಳಿಕ ಕಲಬುರಗಿಯಲ್ಲಿ ಜವಳಿ ಪಾರ್ಕ್ ಸ್ಥಾಪಿಸಲು ನಿರ್ಧರಿಸಿದ ನಿರ್ಧರಿಸಿತ್ತು, ಆದರೆಸ ಕೇಂದ್ರ ಸರ್ಕಾರಕ್ಕೆ ಈ ಸಂಬಂಧ ಪ್ರಸ್ತಾವನೆ ಕಳುಹಿಸುವ ಮೊದಲು, 1,000 ಎಕರೆ ಭೂಮಿಯನ್ನು ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿಗೆ ವರ್ಗಾಯಿಸಿತ್ತು, ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿಯು ಜವಳಿ ಪಾರ್ಕ್‌ಗೆ ಮೂಲಸೌಕರ್ಯ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಸಂಸ್ಥೆಯಾಗಿದೆ.
ಮೆಗಾ ಟೆಕ್ಸ್‌ಟೈಲ್ ಪಾರ್ಕ್'ನ್ನು ತಮ್ಮ ಜಿಲ್ಲೆಗಳಲ್ಲಿ ಸ್ಥಾಪಿಸಬೇಕೆಂದು ಆಡಳಿತಾರೂಢ ಪಕ್ಷದ ನಾಯಕರು ಪೈಪೋಟಿಗೆ ಬಿದ್ದಿದ್ದರು. ಈ ಪೈಪೈಟಿ ಆಯಾಮೆಗಾ ಟೆಕ್ಸ್‌ಟೈಲ್ ಪಾರ್ಕ್ ಸ್ಥಾಪನೆ ಕುರಿತು ಅನುಮಾನಗಳು ಮೂಡುವಂತೆ ಮಾಡಿತ್ತು. ಮೈಸೂರು, ತುಮಕೂರು, ರಾಯಚೂರು, ವಿಜಯಪುರ ಮತ್ತು ಕಲಬುರಗಿಯಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ಅಂದಿನ ಬಿಎಸ್ ಯಡಿಯೂರಪ್ಪ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿತ್ತು.
ಅಕ್ಟೋಬರ್ 13, 2021 ರಂದು ಬಸವರಾಜ ಬೊಮ್ಮಾಯಿ ಸರ್ಕಾರವು ಕಲಬುರಗಿ, ತುಮಕೂರು ಮತ್ತು ವಿಜಯಪುರದಲ್ಲಿ ಮೆಗಾ ಟೆಕ್ಸ್‌ಟೈಲ್ ಪಾರ್ಕ್ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಅವರು ಮಾರ್ಚ್ 8, 2022 ರಂದು ಕೇಂದ್ರ ಜವಳಿ ಸಚಿವಾಲಯದ ಕಾರ್ಯದರ್ಶಿಗೆ ಪತ್ರ ಬರೆದು, ಕಲಬುರಗಿ ಮತ್ತು ವಿಜಯಪುರದಲ್ಲಿ ಮೆಗಾ ಟೆಕ್ಸ್‌ಟೈಲ್ ಪಾರ್ಕ್‌ಗಳನ್ನು ಸ್ಥಾಪಿಸಲು ತಾತ್ವಿಕ ಅನುಮೋದನೆಯನ್ನು ನೀಡುವಂತೆ ಮನವಿ ಮಾಡಿಕೊಂಡಿದ್ದರು. ಕಲಬುರಗಿ ಸಂಸದರು ತಮ್ಮ ಕ್ಷೇತ್ರದಲ್ಲೇ ಪಾರ್ಕ್ ಮಾಡಬೇಕೆಂದು ಒತ್ತಾಯಿಸಿದ್ದರು.
إرسال تعليق