5, 8ನೇ ತರಗತಿ ಬೋರ್ಡ್​ ಪರೀಕ್ಷೆ: 'ಹೈ' ಆದೇಶ ಪ್ರಶ್ನಿಸಿ ಸುಪ್ರೀಂಗೆ ಅನುದಾನರಹಿತ ಖಾಸಗಿ ಶಾಲೆಗಳ ಮೇಲ್ಮನವಿ; ಮಾರ್ಚ್ 27ಕ್ಕೆ ವಿಚಾರಣೆ

 5 ಮತ್ತು 8ನೇ ತರಗತಿ ಬೋರ್ಡ್​ ಪರೀಕ್ಷೆ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಳಿಂದ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲಾಗಿದೆ.

                                                                   ಸುಪ್ರೀಂಕೋರ್ಟ್

By : Rekha.M
Online Desk

ದೆಹಲಿ: 5 ಮತ್ತು 8ನೇ ತರಗತಿ ಬೋರ್ಡ್​ ಪರೀಕ್ಷೆ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಳಿಂದ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲಾಗಿದೆ. ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್​ಗೆ ವಕೀಲರು ಮನವಿ ಮಾಡಿದ್ದಾರೆ. ಮಾರ್ಚ್ 27ರಂದು ವಿಚಾರಣೆ ನಡೆಸುವುದಾಗಿ ಸಿಜೆಐ ಹೇಳಿದೆ.

ಮಾರ್ಚ್ 27ರಿಂದ ಪರೀಕ್ಷೆಗಳು ಆರಂಭವಾಗಲಿದೆ. ಅಷ್ಟರೊಳಗೆ ಮೇಲ್ಮನವಿ ವಿಚಾರಣೆ ನಡೆಸುವಂತೆ ವಕೀಲರು ಮನವಿ ಮಾಡಿದರು. ಆದ್ರೆ ಸಿಜೆಐ ಡಿ.ವೈ. ಚಂದ್ರಚೂಡ್ ವಕೀಲರ ಮನವಿ ತಿರಸ್ಕರಿಸಿದ್ದಾರೆ. ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದು ಬೇಡ. ರಾಜ್ಯದಲ್ಲಿ ಯಾವುದು ಉತ್ತಮವೆಂದು ಹೈಕೋರ್ಟ್​ಗೆ ಗೊತ್ತಿದೆ. ನಾವು 4,000 ಶಾಲೆಗಳನ್ನು ಪ್ರತಿನಿಧಿಸುತ್ತೇವೆ. ನಮ್ಮ ವಾದ ಆಲಿಸಬೇಕೆಂದು ಸಿಜಿಐ ಚಂದ್ರಚೂಡ್​ ಅವರಿಗೆ ವಕೀಲರಿಗೆ ಸೂಚಿಸಿದ್ದಾರೆ. ವಕೀಲರ ವಾದದ ಬಳಿಕ ಮಾರ್ಚ್ 27 ರಂದೇ ವಿಚಾರಣೆ ನಡೆಸುವುದಾಗಿ ಸಿಜೆಐ ತಿಳಿಸಿದ್ದಾರೆ.

ಪ್ರಸಕ್ತ ಶೈಕ್ಷಣಿಕ ವರ್ಷದಿಂದ 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು. ಇದನ್ನು ವಿರೋಧಿಸಿ ಪೋಷಕರ ಸಂಘಟನೆ ಕೋರ್ಟ್ ಮೊರೆ ಹೋಗಿತ್ತು. ಪೋಷಕರ ಮನವಿಗೆ ಸಮ್ಮತಿಸಿ 5 ಮತ್ತು 8ನೇ ತರಗತಿಯ ಮಕ್ಕಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್​ನ ಏಕಸದಸ್ಯ ಪೀಠ ರದ್ದುಪಡಿಸಿತ್ತು.

ಬಳಿಕ ಇದರ ವಿರುದ್ಧ ಶಿಕ್ಷಣ ಇಲಾಖೆ ಮೇಲ್ಮನವಿ ಸಲ್ಲಿಸಿತ್ತು. ನಂತರ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿ ಹೈಕೋರ್ಟ್ ತೀರ್ಪು ನೀಡಿತ್ತು. ಹೈಕೋರ್ಟ್ ಅನುಮತಿ ನೀಡಿದ ಕಾರಣ ಮಾರ್ಚ್ 27ರಿಂದ  ಏಪ್ರಿಲ್ 1ರ ವರೆಗೆ ಬೋರ್ಡ್ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿತ್ತು. ಸದ್ಯ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಸಂಘಗಳು ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿವೆ.

Post a Comment

أحدث أقدم