ಉದ್ಘಾಟನೆಯಾದ 6 ದಿನಕ್ಕೆ ಅವಾಂತರ: ರಾಮನಗರ ಬಳಿ ಹೊಳೆಯಂತಾದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ

 ಕಳೆದ ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ನಿನ್ನೆ ತಡರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ(Bengaluru-Mysuru Expressway) ರಾಮನಗರ ಬಳಿ ಹಳ್ಳದಂತಾಗಿದೆ.

                 ರಾಮನಗರ ಬಳಿ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಹಳ್ಳದಂತಾಗಿರುವುದು
By :Rekha.M
Online Desk




ರಾಮನಗರ: ಕಳೆದ ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ನಿನ್ನೆ ತಡರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ(Bengaluru-Mysuru Expressway) ರಾಮನಗರ ಬಳಿ ಹಳ್ಳದಂತಾಗಿದೆ.

ರಾಮನಗರ ತಾಲ್ಲೂಕಿನ ಸಂಗಬಸವನದೊಡ್ಡಿ ಮೇಲ್ಸೇತುವೆ ಹೆದ್ದಾರಿ ಬಳಿ ನೀರು ನಿಂತು ಸಂಪೂರ್ಣ ಜಲಾವೃತವಾಗಿದೆ. ಇದರಿಂದ ಹೆದ್ದಾರಿಯಲ್ಲಿಯೇ ಏಕಾಏಕಿ ವಾಹನಗಳು ಕೆಟ್ಟು ನಿಂತಿದ್ದು, ವಾಹನಗಳ ನಡುವೆ ಸರಣಿ ಅಪಘಾತವಾಗುತ್ತಿದೆ. ಜೊತೆಗೆ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ತೊಂದರೆಗೆ ಸಿಲುಕಿದ್ದಾರೆ.

ಕಳೆದ ಭಾನುವಾರವಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯನ್ನು ಉದ್ಘಾಟಿಸಿದ್ದರು. ಉದ್ಘಾಟನೆಯಾದ 6 ದಿನಕ್ಕೇ ಎಕ್ಸ್​​ಪ್ರೆಸ್​ ವೇನಲ್ಲಿ ಈ ಅವಾಂತರವಾಗಿದೆ. ಇನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI), ಮಳೆಯಿಂದ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದಿತ್ತು. ಆದರೀಗ ಉದ್ಘಾಟನೆಯಾದ 6 ದಿನಕ್ಕೆ ಮಳೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. 

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳು ಮುಂದುವರಿದಿದ್ದು ನಿನ್ನೆ ರಾಮನಗರ ತಾಲೂಕಿನ ಬಸವನಪುರ ಬಳಿ ಮೇಲ್ಸೇತುವೆಯ ತಡೆಗೋಡೆಗೆ ಲಾರಿಯೊಂದು ಡಿಕ್ಕಿ ಹೊಡೆದು ಲಾರಿ ಹಾಗೂ ಕಾರು ಚಾಲಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದರು. ಸ್ಥಳಕ್ಕೆ ಆಗಮಿಸಿದ ರಾಮನಗರ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದರು.

Post a Comment

Previous Post Next Post