ಇದೇ ಮೊದಲ ಬಾರಿಗೆ 80 ವರ್ಷಕ್ಕೂ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರೂ ಮನೆಯಿಂದಲೇ ಮತದಾನ ಮಾಡಲು ಬಯಸಿದರೆ ಅದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ಬೆಂಗಳೂರು: ಇದೇ ಮೊದಲ ಬಾರಿಗೆ 80 ವರ್ಷಕ್ಕೂ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರೂ ಮನೆಯಿಂದಲೇ ಮತದಾನ ಮಾಡಲು ಬಯಸಿದರೆ ಅದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ವಿಧಾನಸೌಧದಲ್ಲಿಂದು ರಾಜ್ಯ ವಿಧಾನಸಭಾ ಚುನಾವಣೆಯ ಪೂರ್ವ ಸಿದ್ಧತೆ ಕುರಿತು ಮಾಹಿತಿ ನೀಡಿದ ಅವರು, ಕಳೆದ ಮೂರು ದಿನಗಳಿಂದ ರಾಜಕೀಯ ಪಕ್ಷಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.
ಇದೇ ಮೊದಲ ಬಾರಿಗೆ, ರಾಜ್ಯದಲ್ಲಿ ಎಲ್ಲಾ 80 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ವಿಶೇಷ ಮತದಾರರು ಬಯಸಿದಲ್ಲಿ, ಅವರ ಮನೆಯಿಂದಲೂ ಮತದಾನ ಮಾಡುವ ಸೌಲಭ್ಯ ಒದಗಿಸಲಿದ್ದೇವೆ. ಅಧಿಸೂಚನೆ ಹೊರಡಿಸಿದ 5 ದಿನಗಳೊಳಗೆ ಫಾರ್ಮ್ 12 ಡಿ ಲಭ್ಯವಿರುತ್ತದೆ. ಇದರಿಂದ 80 ವರ್ಷಕ್ಕೂ ಮೇಲ್ಪಟ್ಟವರು ಅಥವಾ ವಿಶೇಷ ಚೇತನ ಮತದಾರರು ಮನೆಯಿಂದಲೇ ತಮ್ಮ ಹಕ್ಕು ಚಲಾಯಿಸಬಹುದು ಎಂದರು.
إرسال تعليق