ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ಚುವರಿಯಾಗಿ 941 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದ್ದು, ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಸಂಗ್ರಹ ಚಿತ್ರ
ಬೆಂಗಳೂರು: ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ಚುವರಿಯಾಗಿ 941 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದ್ದು, ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಕರ್ನಾಟಕ ಸೇರಿ ಐದು ರಾಜ್ಯಗಳಿಗೆ ಹೆಚ್ಚುವರಿಯಾಗಿ 1816.162 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ.
ಕರ್ನಾಟಕಕ್ಕೆ 941.04 ಕೋಟಿ, ಅಸ್ಸಾಂಗೆ 520.466 ರೂ, ಹಿಮಾಚಲ ಪ್ರದೇಶಕ್ಕೆ 239.31 ಕೋಟಿ ರೂ, ಮೇಘಾಲಯಕ್ಕೆ 47.326 ಕೋಟಿ ರೂಪಾಯಿ ಮತ್ತು ನಾಗಾಲ್ಯಾಂಡ್ಗೆ 68.02 ಕೋಟಿ ರುಪಾಯಿ ಹೆಚ್ಚುವರಿ ಪರಿಹಾರವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಲು ಒಪ್ಪಿಗೆ ಸೂಚಿಸಿದೆ.
ರಾಜ್ಯಕ್ಕೆ ಹೆಚ್ಚುವರಿಯಾಗಿ ಹಣ ಬಿಡುಗಡೆ ಮಾಡಿರುವುದಕ್ಕೆ ಪ್ರಧಾನಿ ಮೋದಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧನ್ಯವಾದ ಸಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, 2022ರ ಅವಧಿಯಲ್ಲಿ ಉಂಟಾದ ಪ್ರವಾಹ, ಭೂ ಕುಸಿತ, ಅತಿವೃಷ್ಟಿಯಿಂದ ಹಾನಿಗೊಳಗಾಗಿದ್ದ ರಾಜ್ಯಕ್ಕೆ, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿಯಲ್ಲಿ ಹೆಚ್ಚುವರಿಯಾಗಿ ₹941.04 ಕೋಟಿಯನ್ನು ಮಂಜೂರು ಮಾಡಿದ್ದು, ಸಹಜವಾಗಿಯೇ ಹರ್ಷ ತಂದಿದೆ. ಕರ್ನಾಟಕದ ಬಗೆಗಿನ ವಿಶೇಷ ಕಾಳಜಿಗಾಗಿ, ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.
إرسال تعليق