ಪಟ್ಟಣದ ಕಾಗವಾಡ-ಗಣೇಶವಾಡಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ .60 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣಗಳನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದುಕೊಂಡಿದ್ದಾರೆ.
ಸಂಗ್ರಹ ಚಿತ್ರ
ಕಾಗವಾಡ (ಬೆಳಗಾವಿ ಜಿಲ್ಲೆ): ಪಟ್ಟಣದ ಕಾಗವಾಡ-ಗಣೇಶವಾಡಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ .60 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣಗಳನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದುಕೊಂಡಿದ್ದಾರೆ.
ಚೆಕ್ ಪೋಸ್ಟ್ ಬಳಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ಪೊಲೀಸರಿಗೆ, ಕಾರೊಂದರಲ್ಲಿ ಬೆಳ್ಳಿ ಆಭರಣಗಳು ಪತ್ತೆಯಾಗಿದೆ. ಅವುಗಳ ದಾಖಲೆಗಳ ಬಗ್ಗೆ ವಿಚಾರಿಸಿದಾಗ ಚಾಲಕರು ದಾಖಲೆಗಳನ್ನು ನೀಡಿಲ್ಲ.
ಈ ಹಿನ್ನೆಲೆಯಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಶ್ರೀಪಾದ್ ಜಲ್ದೆ ಅವರ ಸೂಚನೆಯಂತೆ ಸರ್ಕಲ್ ಪೊಲೀಸ್ ಇನ್ಸ್‌ಪೆಕ್ಟರ್ ರವೀಂದ್ರ ನಾಯ್ಕವಾಡಿ ನೇತೃತ್ವದ ತಂಡ ಆಭರಣ ಹಾಗೂ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸಂಬಂಧ ಕಾಗವಾಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.
Post a Comment