ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ತಡೆ!

 ಸಾರಿಗೆ ನೌಕರರ ವೇತನ ಶೇಕಡ 15ರಷ್ಟು ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದ್ದರೂ ಇದಕ್ಕೆ ಒಪ್ಪದ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಆರ್. ಚಂದ್ರಶೇಖರ್ ನಾಳೆಯಿಂದ ಮುಷ್ಕರ ನಡೆಸುವುದಾಗಿ ಘೋಷಿಸಿದ್ದರು.

                                                                   ಸಾಂದರ್ಭಿಕ ಚಿತ್ರ

By : Rekha.M
Online Desk

ಬೆಂಗಳೂರು: ಸಾರಿಗೆ ನೌಕರರ ವೇತನ ಶೇಕಡ 15ರಷ್ಟು ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದ್ದರೂ ಇದಕ್ಕೆ ಒಪ್ಪದ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಆರ್. ಚಂದ್ರಶೇಖರ್ ನಾಳೆಯಿಂದ ಮುಷ್ಕರ ನಡೆಸುವುದಾಗಿ ಘೋಷಿಸಿದ್ದರು. 

ಇದೀಗ ಹೈಕೋರ್ಟ್ ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ತಡೆ ನೀಡಿದೆ. ರಾಜ್ಯದಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು ಮುಷ್ಕರದಿಂದ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಮೂರು ವಾರಗಳ ಕಾಲ ಮುಷ್ಕರ ನಡೆಸಬಾರದು ಎಂದು ಹೈಕೋರ್ಟ್ ಆದೇಶಿಸಿದೆ. 

ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆಯ ಮುಷ್ಕರನ್ನು ಪ್ರಶ್ನಿಸಿ ಹೆಚ್ ಎಂ ವೆಂಕಟೇಶ್ ಎಂಬುವವರು ಹೈಕೋರ್ಟ್ ಗೆ ಪಿಐಎಲ್ ಹಾಕಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಷ್ಕರಕ್ಕೆ ತಡೆ ನೀಡಿದೆ. 


Post a Comment

أحدث أقدم