ಶಿವಮೊಗ್ಗ: ಅನಧಿಕೃತವಾಗಿ ಸಂಗ್ರಹಿಸಿಟ್ಟಿದ್ದ ವಸ್ತುಗಳು ಮತ್ತು ನಗದು ಹಣ ಅಮಾನತು ಪಡಿಸಿಕೊಳ್ಳಲಾಗಿದೆ.

 ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ ಸಾಗಾತ ಮಾಡುತ್ತಿದ್ದ ಮತ್ತು ಅನಧಿಕೃತವಾಗಿ ಸಂಗ್ರಹಿಸಿಟ್ಟಿದ್ದ ಈ ಕೆಳಕಂಡ ವಸ್ತುಗಳು ಮತ್ತು ನಗದು ಹಣವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ.

1. ದಿನಾಂಕ 31-03-2023 ರಂದು ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಅನಧೀಕೃತವಾಗಿ ಸಂಗ್ರಹಿಸಿ ಇಟ್ಟಿದ್ದ ಅಂದಾಜು ಮೌಲ್ಯ ರೂ. 4.50.00.000/-ಗಳ ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ.

2. ದಿನಾಂಕ 31-03-2023 ರಂದು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಬುಲೆರೋ ವಾಹನದಲ್ಲಿ ಸಾಗಿಸುತ್ತಿದ್ದ ರೂ 1.40.00.000/- ನಗದು ಹಣವನ್ನುಲಾಗಿದೆ.

3. ದಿನಾಂಕ 31-032023 ರಂದು ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ ರೂ 20.00.000/- ನಗದು ಹನವನ್ನು ವಶಪಡಿಸಿಕೊಳ್ಳಲಾಗಿದೆ.

4. ದಿನಾಂಕ 31-03-2023 ರಂದು ವಿನೋಬನಗರ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಒಟ್ಟು 100 ಬ್ಯಾಗ್ ಗಳಲ್ಲಿದ್ದ ಅಂದಾಜು 1.56.000/- ಮೌಲ್ಯದ 26 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.




Post a Comment

Previous Post Next Post