ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮಹಿಳಾ ಸ್ವ-ಸಹಾಯ ಗುಂಪುಗಳ (ಎಸ್ಎಚ್ಜಿ) ಬೆಂಬಲಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘ಸ್ತ್ರೀ ಸಾಮರ್ಥ್ಯ-ನಮೋ ಸ್ತ್ರೀ ಯೋಜನೆ’ಗೆ ಬುಧವಾರ ಚಾಲನೆ ನೀಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ, ಬುಧವಾರ ಬೆಂಗಳೂರಿನಲ್ಲಿ ಸಾಲುಮರದ ತಿಮ್ಮಕ್ಕ ಅವರೊಂದಿಗೆ ಸಂವಾದ ನಡೆಸಿದರು.By : Rekha.M
Online Desk
ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮಹಿಳಾ ಸ್ವ-ಸಹಾಯ ಗುಂಪುಗಳ (ಎಸ್ಎಚ್ಜಿ) ಬೆಂಬಲಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘ಸ್ತ್ರೀ ಸಾಮರ್ಥ್ಯ-ನಮೋ ಸ್ತ್ರೀ ಯೋಜನೆ’ಗೆ ಬುಧವಾರ ಚಾಲನೆ ನೀಡಿದರು.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಬುಧವಾರ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಸಿಎಂ ಬೊಮ್ಮಾಯಿಯವರು ಯೋಜನೆಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಯೋಜನೆಗೆ 500 ಕೋಟಿ ರೂಪಾಯಿ ಮತ್ತು 9,890 ಸ್ವಸಹಾಯ ಗುಂಪುಗಳಿಗೆ 100 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ.ಯೋಜನೆಯಡಿ ಪ್ರತಿ ಜಿಲ್ಲೆಯಲ್ಲಿ ಮೂರು ಕೈಗಾರಿಕಾ ಘಟಕಗಳು ಮತ್ತು 15 ಉತ್ಪನ್ನ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು 50,000 ಸಂಘಗಳನ್ನು ಗುರುತಿಸಲಾಗಿದೆ ಎಂದು ಹೇಳಿದರು.
ಮಹಿಳೆಯರಿಗೆ ಉದ್ಯೋಗ ಸೃಷ್ಟಿಸಲು ಕ್ಯಾಸ್ಟರ್ ಆಯಿಲ್, ಜಾಮ್, ಮಣ್ಣಿನ ಪಾತ್ರೆಗಳು, ಚಿಪ್ಸ್ ಮತ್ತು ಇತರ ವಸ್ತುಗಳನ್ನು ಉತ್ಪಾದಿಸುವ ಘಟಕಗಳನ್ನು ಸ್ಥಾಪಿಸಲಾಗುವುದು. ರಾಜ್ಯ ಸರ್ಕಾರವು ಕೌಶಲ್ಯಾಭಿವೃದ್ಧಿ ಮತ್ತು ಮಹಿಳಾ ಉದ್ಯಮಿಗಳಿಗೆ ಬೆಂಬಲ ಮತ್ತು ಅವಕಾಶಗಳನ್ನು ಸೃಷ್ಟಿಸಲು ಹಣವನ್ನು ಮೀಸಲಿಟ್ಟಿದೆ. ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಮತ್ತು ತರಬೇತಿ ನೀಡಲಾಗುವುದು. ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) 2026 ರ ವೇಳೆಗೆ ಐದು ಲಕ್ಷ ಮಹಿಳೆಯರಿಗೆ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ. ಮಹಿಳಾ ಉದ್ಯೋಗಿಗಳನ್ನು ಸಬಲೀಕರಣಗೊಳಿಸಲು ಕೆಡಿಇಎಂ ಕೈಗಾರಿಕೆಗಳೊಂದಿಗೆ ಏಳು ಒಪ್ಪಂದಗಳಿಗೆ ಸಹಿ ಹಾಕಿದೆ ಎಂದು ತಿಳಿಸಿದರು.
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸಿತ್ತು. ನೈಋತ್ಯ ರೈಲ್ವೆಯಲ್ಲಿ ಹಲವಾರು ರೈಲುಗಳು ಮತ್ತು ಇತರ ಸೇವೆಗಳನ್ನು ಮಹಿಳಾ ಸಿಬ್ಬಂದಿ ನಿರ್ವಹಿಸಿದರು. ಇನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಗರ್ಭಕೋಶದ ಕ್ಯಾನ್ಸರ್ ತಡೆಗಟ್ಟಲು 12 ರಿಂದ 14 ವರ್ಷದೊಳಗಿನ ಬಾಲಕಿಯರಿಗೆ ಲಸಿಕೆ ಹಾಕುವ ಕಾರ್ಯಕ್ರಮವನ್ನು ನಡೆಸಲಾಯಿತು.
Post a Comment