ಎಸ್‌ಟಿ, ಎಸ್‌ಸಿ ಮೀಸಲಾತಿ ವಿಳಂಬ ಖಂಡಿಸಿ ರಾಜಭವನ ಚಲೋ: ಸಿದ್ದರಾಮಯ್ಯ, ಡಿಕೆ.ಶಿವಕುಮಾರ್ ವಶಕ್ಕೆ ಪಡೆದ ಪೊಲೀಸರು

 ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಮಾಡಿದರೂ ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ‌ ಶಿಫಾರಸ್ಸು ಮಾಡಿಲ್ಲ ಎಂದು‌ ಆರೋಪಿಸಿ ರಾಜಭವನ ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

                                              ಪ್ರತಿಭಟನಾನಿರತ ಕಾಂಗ್ರೆಸ್ ನಾಯಕರು.
By :Rekha.M
Online Desk

ಬೆಂಗಳೂರು: ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಮಾಡಿದರೂ ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ‌ ಶಿಫಾರಸ್ಸು ಮಾಡಿಲ್ಲ ಎಂದು‌ ಆರೋಪಿಸಿ ರಾಜಭವನ ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕೆಪಿಸಿಸಿ ಕಚೇರಿಯಿಂದ ರಾಜಭವನಕ್ಕೆ ತೆರಳಲು ಮುಂದಾದ ಕಾಂಗ್ರೆಸ್‌ ನಾಯಕರನ್ನು ಪೊಲೀಸರು ಮಾರ್ಗದ ಮಧ್ಯೆಯೇ ತಡೆದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಸೇರಿದಂತೆ ಹಲವಾರು ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು. ಸದ್ಯ ಕಾಂಗ್ರೆಸ್‌ ನಾಯಕರನ್ನು ವಶಕ್ಕೆ ಪಡೆದಿರುವ ಪೊಲೀಸರು ಬಸ್‌ನಲ್ಲಿ ಕರೆದುಕೊಂಡು ಹೋಗಿದ್ದಾರೆ.

ವಶಕ್ಕೆ ಪಡೆಯುವುದಕ್ಕೆ ಮುನ್ನ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಮೋಸ ಮಾಡಿದೆ. ಇಲ್ಲಿಯವರೆಗೆ ಸುಮ್ಮನಿದ್ದ ಅವರು ನಾವು ಪ್ರತಿಭಟನೆಗೆ ಮುಂದಾದ ಬಳಿ ಇವತ್ತು ಕಳುಹಿಸಲು ಮುಂದಾಗಿದ್ದಾರೆ ಎಂದು ಕಿಡಿಕಾರಿದರು.


Post a Comment

أحدث أقدم