ಕರ್ನಾಟಕ ವಿಧಾನಸಭಾ 2023ಕ್ಕೆ ಇನ್ನೊಂದು ತಿಂಗಳು ಬಾಕಿಯಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿವೆ. ಪ್ರಚಾರ ಕಾರ್ಯವನ್ನು ಕೂಡ ಆರಂಭಿಸಿವೆ.
ಚುನಾವಣಾ ಆಯೋಗಬೆಂಗಳೂರು: ಕರ್ನಾಟಕ ವಿಧಾನಸಭಾ 2023ಕ್ಕೆ ಇನ್ನೊಂದು ತಿಂಗಳು ಬಾಕಿಯಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿವೆ. ಪ್ರಚಾರ ಕಾರ್ಯವನ್ನು ಕೂಡ ಆರಂಭಿಸಿವೆ.
ಮೇ ತಿಂಗಳ ಎರಡನೇ ವಾರದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ(Election Commission) ಪತ್ರದ ಮೂಲಕ ತುರ್ತು ಸೂಚನೆ ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆ(Code of Conduct) ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಸಂದೇಶ ನೀಡಿದ್ದು, ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆಯಾಗಬಹುದು. ಹೀಗಾಗಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗಳನ್ನು ಸಿದ್ದವಿಟ್ಟುಕೊಳ್ಳಿ ಎಂದು ಸೂಚಿಸಲಾಗಿದೆ.
ಇದೇ ಮಾರ್ಚ್ 27 ಅಥವಾ 28ರಂದು ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ, ನೀತಿ ಸಂಹಿತೆ ಜಾರಿಯ ಬಗ್ಗೆ ಪ್ರಕಟಿಸುವ ಸಾಧ್ಯತೆಯಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಇತರ ಇಬ್ಬರು ಚುನಾವಣಾ ಆಯುಕ್ತರಾದ ಅನುಪ್ ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಅವರು ನವದೆಹಲಿಯಲ್ಲಿ ಚುನಾವಣಾ ವೇಳಾಪಟ್ಟಿಯನ್ನು ಘೋಷಣೆ ಮಾಡಲಿದ್ದು, ತಕ್ಷಣ ನೀತಿ ಸಂಹಿತೆ ರಾಜ್ಯಾದ್ಯಂತ ಜಾರಿಗೆ ಬರಲಿದೆ.
إرسال تعليق