ಮಹಾರಾಷ್ಟ್ರ ಉದ್ದಟತನ ಮುಂದುವರೆಸಿದರೆ ಗಡಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ವಿಮೆ ಜಾರಿಗೊಳಿಸಬೇಕಾಗುತ್ತದೆ: ಸಿಎಂ ಬೊಮ್ಮಾಯಿ

 ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಚುನಾವಣೆ ಹೊತ್ತಿನಲ್ಲಿ ಮತ್ತೆ ಮುನ್ನಲೆಗೆ ಬಂದಿದೆ.ಅದಕ್ಕೆ ಕಾರಣ ಕರ್ನಾಟಕದ ಗಡಿಯಲ್ಲಿರುವ ಕೆಲವರಿಗೆ ವಿಮೆ ನೀಡುವ ಆದೇಶ  ಮಾಡಿರುವುದು, ಇದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ವಿಪಕ್ಷಗಳು ಮಹಾರಾಷ್ಟ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ರಾಜ್ಯ ಬಿಜೆಪಿ ಸರ್ಕಾರ ನಿದ್ದೆ ಮಾಡುತ್ತಿದೆಯೇ ಎಂದು ಪ್ರಶ್ನಿಸುತ್ತಿದೆ.

                                                           ಬಸವರಾಜ ಬೊಮ್ಮಾಯಿ

By : Rekha.M
Online Desk

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಚುನಾವಣೆ ಹೊತ್ತಿನಲ್ಲಿ ಮತ್ತೆ ಮುನ್ನಲೆಗೆ ಬಂದಿದೆ.ಅದಕ್ಕೆ ಕಾರಣ ಕರ್ನಾಟಕದ ಗಡಿಯಲ್ಲಿರುವ ಕೆಲವರಿಗೆ ವಿಮೆ ನೀಡುವ ಆದೇಶ  ಮಾಡಿರುವುದು, ಇದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ವಿಪಕ್ಷಗಳು ಮಹಾರಾಷ್ಟ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ರಾಜ್ಯ ಬಿಜೆಪಿ ಸರ್ಕಾರ ನಿದ್ದೆ ಮಾಡುತ್ತಿದೆಯೇ ಎಂದು ಪ್ರಶ್ನಿಸುತ್ತಿದೆ.

ಈ ಬಗ್ಗೆ ಇಂದು ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಸಿಎಂ ಬೊಮ್ಮಾಯಿ, ಮಹಾರಾಷ್ಟ್ರ ಸರ್ಕಾರ ಇದೇ ರೀತಿ ಉದ್ದಟತನ ಮುಂದುವರೆಸಿದರೆ ಕರ್ನಾಟಕ ಸರ್ಕಾರವೂ ಕೂಡ ಮಹಾರಾಷ್ಟ್ರ ಗಡಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ಇದೇ ರೀತಿಯ ವಿಮೆ ಜಾರಿಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. 

ಕರ್ನಾಟಕ ಗಡಿ ಭಾಗದಲ್ಲಿರುವ 865 ಹಳ್ಳಿಗಳಿಗೆ ಮಹಾರಾಷ್ಟ್ರ ಸರ್ಕಾರದ ವಿಮೆ ಘೋಷಣೆ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿ, ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್ ‌ನಲ್ಲಿ ಇದ್ದರೂ ಮಹಾರಾಷ್ಟ್ರ ಸರ್ಕಾರ ಎರಡೂ ರಾಜ್ಯಗಳ ಗಡಿ ಭಾಗದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಕರ್ನಾಟಕದ ಗಡಿಯಲ್ಲಿರುವ ಕೆಲವರಿಗೆ ವಿಮೆ ನೀಡುವ ಆದೇಶ ಮಾಡಿರುವುದು ಉದ್ದಟತನದ ಪರಮಾವಧಿಯಾಗಿದ್ದು, ಇದು ಎರಡು ರಾಜ್ಯಗಳ ನಡುವಿನ ಬಾಂಧವ್ಯ ಕದಡುವ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದಾರೆ.

ಈಗ ಕರ್ನಾಟಕದ 865 ಗ್ರಾಮಗಳ ಜನತೆಗೆ ಬಾಬು ಜಗಜೀವನ್ ರಾಮ್ ಆರೋಗ್ಯ ವಿಮೆ ಯೋಜನೆ ಜಾರಿಗೆ ಆದೇಶ ಮಾಡಿರುವುದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸವಾಗಿದೆ. ಮಹಾರಾಷ್ಟ್ರ ಸರ್ಕಾರ ತಕ್ಷಣ ತನ್ನ ಆದೇಶವನ್ನು ವಾಪಸ್ ಪಡೆದು, ಕೇಂದ್ರ ಸಚಿವ ಅಮಿತ್ ಶಾ ಅವರ ಸೂಚನೆಗೆ ಗೌವರ ಕೊಡುವ ಮೂಲಕ ಎರಡೂ ರಾಜ್ಯಗಳ ನಡುವಿನ ಬಾಂಧವ್ಯ ಕಾಪಾಡುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಆಕ್ರೋಶ: ಕರ್ನಾಟಕದ ಗಡಿಯಲ್ಲಿರುವ 865 ಹಳ್ಳಿಗಳಿಗೆ ಆರೋಗ್ಯ ವಿಮೆ ಜಾರಿ ಮಾಡಿರುವ ಮಹಾರಾಷ್ಟ್ರ ಸರ್ಕಾರದ ಕ್ರಮ ಉದ್ಧಟತನದ್ದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಇದನ್ನು ಸಹಿಸಲು ಸಾಧ್ಯವೇ ಇಲ್ಲ. ಈ ಆದೇಶವನ್ನು ತಕ್ಷಣ ವಾಪಸ್ ಪಡೆಯದೆ ಇದ್ದರೆ ಪರಿಣಾಮ ನೆಟ್ಟಗಾಗದು ಎಂದು ಎಚ್ಚರಿಕೆ ನೀಡಿದ್ದಾರೆ. 

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು ಮಹಾರಾಷ್ಟ್ರ ಸರ್ಕಾರವೋ ಅಥವಾ ನರಸತ್ತ BJP ಸರ್ಕಾರವೋ? ಕೇಂದ್ರ ಗೃಹ ಸಚಿವರ ಮಧ್ಯಸ್ಥಿಕೆ, ಕನ್ನಡಿಗರ ಆಕ್ರೋಶ ಬದಿಗೊತ್ತಿ ರಾಜ್ಯದ 865 ಹಳ್ಳಿಗಳಿಗೆ ಆರೋಗ್ಯ ವಿಮೆ ಯೋಜನೆ ಜಾರಿಗೊಳಿಸಿರುವುದು ಉದ್ಧಟತನದ ಪರಮಾವಧಿ. ಈಗ ಮುಖ್ಯಮಂತ್ರಿಗಳು ತಮ್ಮ ಧಮ್ಮು ತಾಕತ್ತು ತೋರಿಸಲಿ ಇಲ್ಲ ಮನೆ ಕಡೆ ನಡೆಯಲಿ ಎಂದು ಡಿ ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.



Post a Comment

Previous Post Next Post