ಬಿಜೆಪಿ ಟಿಕೆಟ್ ಘೋಷಣೆ ಬದಲು ವಿಕೆಟ್ ಬೀಳ್ತಿವೆ! ಕಾಂಗ್ರೆಸ್ ಲೇವಡಿ

 ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ತಿಂಗಳಿಗೂ ಕಡಿಮೆ ದಿನ ಬಾಕಿಯಿದೆ. ಆದರೆ, ಆಡಳಿತಾರೂಢ ಬಿಜೆಪಿ ಮಾತ್ರ ಇನ್ನೂ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ.

                                                              ಕೆಎಸ್ ಈಶ್ವರಪ್ಪ

By : Rekha.M
Online Desk

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ತಿಂಗಳಿಗೂ ಕಡಿಮೆ ದಿನ ಬಾಕಿಯಿದೆ. ಆದರೆ, ಆಡಳಿತಾರೂಢ ಬಿಜೆಪಿ ಮಾತ್ರ ಇನ್ನೂ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ.

ಪಟ್ಟಿ ಬಿಡುಗಡೆಗೂ ಮುನ್ನವೇ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿದ್ದು, ಚುನಾವಣಾ ರಾಜಕೀಯದಿಂದ ದೂರ ಇರುವುದಾಗಿ ಪ್ರಕಟಿಸಿದ್ದಾರೆ. ಇದನ್ನು ಹೊಸ ಅಸ್ತ್ರವನ್ನಾಗಿಸಿಕೊಂಡು ಕಾಂಗ್ರೆಸ್ ಬಿಜೆಪಿ ವಿರುದ್ಧ ಲೇವಡಿ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್  ಬಿಜೆಪಿ ಕಡೆಯಿಂದ ಅಭ್ಯರ್ಥಿಗಳ ಪಟ್ಟಿ ಹೊರಬರುವ ಬದಲು ರಾಜಕೀಯ ನಿವೃತ್ತಿ ಪಡೆಯುವವರ ಪಟ್ಟಿ ಹೊರಬರುತ್ತಿವೆ!ಟಿಕೆಟ್ ಘೋಷಣೆಯಾಗುವ ಬದಲು ವಿಕೆಟ್ ಬೀಳುತ್ತಿವೆ! ಮಂತ್ರಿಗಿರಿಗಾಗಿ ಲಾಭಿ ಮಾಡಿ ಸುಸ್ತಾದ ಕೆಎಸ್ ಈಶ್ವರಪ್ಪ ಈಗ ಟಿಕೆಟ್‌ಗೂ ಲಾಭಿ ನಡೆಸಿ ಸುಸ್ತಾದರು. ಬಿಜೆಪಿಯ ಅವಮಾನ ಸಹಿಸದೆ ರಾಜಕೀಯದಿಂದಲೇ ಪಲಾಯನ ಮಾಡಿದರು ಎಂದು ವ್ಯಂಗ್ಯವಾಡಿದೆ.

ಟಿಕೆಟ್ ಘೋಷಣೆಯ ಮುನ್ನವೇ ವಿಕೆಟ್ ಪತನ ಶುರುವಾಗಿದೆ. ರನ್ ಬಾರಿಸದೆಯೇ ಆಲ್ ಔಟ್ ಆಗುವ ಎಲ್ಲಾ ಲಕ್ಷಣಗಳೂ ಬಿಜೆಪಿಯಲ್ಲಿ ಕಾಣುತ್ತಿವೆ! ರಾಜ್ಯ ಬಿಜೆಪಿ ಈಗ ಸುಧಾರಿಸಿಕೊಂಡು, ಸಾವರಿಸಿಕೊಂಡು 5 ವರ್ಷ ಕಳೆದ ಮೇಲೆ ಚುನಾವಣೆಗೆ ಬನ್ನಿ ಎಂದು ಕಾಂಗ್ರೆಸ್ ಕುಹಕವಾಡಿದೆ.




Post a Comment

أحدث أقدم