ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನದ ಮಾಡುವಂತೆ ಬಸ್ ಟಿಕೆಟ್ ಮೂಲಕ ಜನತೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದೆ.
ಸಂಗ್ರಹ ಚಿತ್ರ
ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನದ ಮಾಡುವಂತೆ ಬಸ್ ಟಿಕೆಟ್ ಮೂಲಕ ಜನತೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದೆ.
ಪ್ರತಿ ಟಿಕೆಟ್ ಕೊನೆಯಲ್ಲಿ ಕನ್ನಡದ ಅಕ್ಷರದಲ್ಲಿ ಮೇ.10ರಂದು ಮತದಾನ ಮಾಡಲು ಮರೆಯದಿರಿ, ಮತದಾನ ನಿಮ್ಮ ಹಕ್ಕು ಎಂಬ ಸಂದೇಶವನ್ನು ಮುದ್ರಿಸಲಾಗಿದೆ.
ಈ ಮೂಲಕ ಕೆಎಸ್‌ಆರ್‌ಟಿಸಿಯಲ್ಲಿ ಪ್ರತಿದಿನ ಸಂಚರಿಸುವ ಲಕ್ಷಾಂತರ ಪ್ರಯಾಣಿಕರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ಕೆಲಸವನ್ನು ಕೆಎಸ್ಆರ್'ಟಿಸಿ ಮಾಡುತ್ತಿದೆ.
ಕೆಎಸ್‌ಆರ್‌ಟಿಸಿ ಎಂಡಿ ಅನ್ಬು ಕುಮಾರ್ ಅವರು ಮಾತನಾಡಿ, “ಬಿಬಿಎಂಪಿಯು ಕಸ ಸಂಗ್ರಹಿಸಲು ಪ್ರತಿ ಬೀದಿಗೆ ಹೋಗುವ ಆಟೋ ಟಿಪ್ಪರ್‌ಗಳಿಗೆ ಧ್ವನಿವರ್ಧಕಗಳನ್ನು ಅಳವಡಿಸುವ ಮೂಲಕ ಬೆಂಗಳೂರಿಗರಲ್ಲಿ ಮತದಾನದ ಜಾಗೃತಿ ಮೂಡಿಸುತ್ತಿದೆ. ನಮ್ಮ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರತಿದಿನ 20 ಲಕ್ಷಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಾರೆ. ನಾವು ನಮ್ಮ ಪ್ರಯಾಣಿಕರಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಲು ಬಯಸುತ್ತೇವೆ. ಹೀಗಾಗಿ ಟಿಕೆಟ್ ಗಳಲ್ಲಿ ಮತದಾನ ಮಾಡುವಂತೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆಂದು ಹೇಳಿದ್ದಾರೆ.
“ಜಾಗೃತಿ ಅಭಿಯಾನದ ಭಾಗವಾಗಿರುವುದಕ್ಕೆ ನಮಗೆ ಸಂತೋಷವಾಗಿದೆ. ಮತದಾನವು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು ಮತ್ತು ಅವರ ಹಕ್ಕು ಚಲಾಯಿಸುವುದನ್ನು ನೆನಪಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲೂ ಸಾರಿಗೆ ನಿಗಮವು ಚುನಾವಣೆ ಮತ್ತು ಮತದಾನದ ಜಾಗೃತಿ ಮೂಡಿಸುವ ಕೆಲಸ ಮಾಡಿತ್ತು. ಈ ವಾರ ಆರಂಭವಾಗಿರುವ ಮತದಾನ ಜಾಗೃತಿ ಅಭಿಯಾನ ಚುನಾವಣೆ ಮುಗಿಯುವವರೆಗೂ ಮುಂದುವರೆಯಲಿದೆ ಎಂದು ಹೇಳಿದ್ದಾರೆ.
Post a Comment