ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಮಾರ್ಚ್ 29 ರಿಂದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಇದರಂತೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ವಿರುದ್ಧ ಚುನಾವಣಾ ಆಯೋಗ ಕಣ್ಗಾವಲನ್ನು ಹೆಚ್ಚಿಸಿದೆ.
ಸಂಗ್ರಹ ಚಿತ್ರ
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಮಾರ್ಚ್ 29 ರಿಂದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಇದರಂತೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ವಿರುದ್ಧ ಚುನಾವಣಾ ಆಯೋಗ ಕಣ್ಗಾವಲನ್ನು ಹೆಚ್ಚಿಸಿದೆ.
ಚುನಾವಣೆ ಪ್ರಕ್ರಿಯೆ ಮುಕ್ತವಾಗಿ ಹಾಗೂ ನ್ಯಾಯಯುತ ರೀತಿಯಲ್ಲಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ನಿಯಂತ್ರಣ ಕೊಠಡಿಗಳ ಸ್ಥಾಪಿಸುವಂತೆ ಎಲ್ಲಾ ಚುನಾವಣಾಧಿಕಾರಿಗಳಿಗೆ ಚುನಾವಣಾ ಆಯೋಗವು ಸೂಚನೆ ನೀಡಿದೆ.
ಯಾವುದೇ ನಾಯಕರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡುತ್ತಿರುವುದು ಕಂಡು ಬಂದರೆ ಜನರು, ನಿಯಂತ್ರಣ ಕೊಠಡಿಗಳಲ್ಲಿ ಸಹಾಯವಾಣಿ ಸಂಖ್ಯೆ 080-28604331 ಮತ್ತು 080-28600954ಗಳ ಮೂಲಕ ದೂರು ನೀಡಬಹುದಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.
ಅಲ್ಲದೆ, ಸಿ-ವಿಜಿಲ್ ಮೊಬೈಲ್ ಅಪ್ಲಿಕೇಶನ್ ಮೂಲಕ ಆನ್‌ಲೈನ್ ದೂರುಗಳನ್ನು ಕೂಡ ನೋಂದಾಯಿಸಬಹುದಾಗಿದೆ, ಅಧಿಕಾರಿಗಳು ಈ ನಿಯಮ ಉಲ್ಲಂಘನೆಗಳ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದೆ.
إرسال تعليق