ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ; ಕಡೂರಿನಿಂದ ವೈಎಸ್ ವಿ ದತ್ತಗೆ ಸಿಗದ ಟಕೆಟ್; ಘೋಷಣೆಯಾಗದ ಕೋಲಾರ ಅಭ್ಯರ್ಥಿ

 ಮೇ 10ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಎಐಸಿಸಿ ಬಿಡುಗಡೆ ಮಾಡಿದೆ.

                                                             ವೈಎಸ್ ವಿ ದತ್ತ

By : Rekha.M
Online Desk

ಬೆಂಗಳೂರು: ಮೇ 10ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಎಐಸಿಸಿ ಬಿಡುಗಡೆ ಮಾಡಿದೆ.

ಚುನಾವಣಾ ನೀತಿಸಂಹಿತೆ ಘೋಷಣೆಗೆ ಮುನ್ನವೇ ‘ಕೈ’ ಪಡೆ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. ಮೇಲುಕೋಟೆ ಕ್ಷೇತ್ರದಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್‌ ಪುಟ್ಟಣ್ಣಯ್ಯ ಅವರನ್ನು ಬೆಂಬಲಿಸಲು ಪಕ್ಷ ನಿರ್ಧರಿಸಿದೆ.

ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಬಿಡುಗಡೆಯಾಗಿದೆ. ಇದುವರೆಗೂ 166 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಇನ್ನೂ 58 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಘೋಷಿಸಬೇಕಿದೆ.

ಪುಲಿಕೇಶಿ ನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಈ ಬಾರಿಯೂ ಘೋಷಣೆ ಆಗಿಲ್ಲ. ಹಾಲಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಗೆ ಟಿಕೆಟ್ ನೀಡಲು ವಿರೋಧ ಇದೆ. ಈ‌ ಹಿನ್ನೆಲೆಯಲ್ಲಿ ಅವರ ಹೆಸರು ಮೊದಲ ಪಟ್ಟಿಯಲ್ಲಿ ಇರಲಿಲ್ಲ. ಟಿಕೆಟ್ ಘೋಷಣೆ ಆಗದ ಹಿನ್ನೆಲೆಯಲ್ಲಿ ಅವರು ಜಮೀರ್ ಅಹ್ಮದ್ ಖಾನ್ ಮೂಲಕ ಸಾಕಷ್ಟು ಲಾಬಿ ನಡೆಸಿದ್ದರು.

ಆದರೆ, ಎರಡನೇ ಪಟ್ಟಿಯಲ್ಲೂ ಅಖಂಡ ಶ್ರೀನಿವಾಸ್ ಮೂರ್ತಿ ಹೆಸರು ಕಾಣಿಸಿಕೊಂಡಿಲ್ಲ. ಜೊತೆಗೆ ಲಿಂಗಸುಗೂರಿನ ಹಾಲಿ ಶಾಸಕ ಡಿಎಸ್‌ ಹುಲಗೇರಿ, ಹರಿಹರ ಕ್ಷೇತ್ರದ ಹಾಲಿ ಶಾಸಕ ರಾಮಪ್ಪ, ಕುಂದಗೋಳದ ಹಾಲಿ ಶಾಸಕಿ ಕುಸುಮಾ ಶಿವಳ್ಳಿ ಅವರಿಗೆ ಟಿಕೆಟ್‌ ಘೋಷಣೆ ಆಗಿಲ್ಲ.

ನಿಪ್ಪಾಣಿ ಕ್ಷೇತ್ರ -ಕಾಕಾ ಸಾಹೇಬ್ ಪಾಟೀಲ್, ಗೋಕಾಕ್ ಕ್ಷೇತ್ರ-ಮಹಾಂತೇಶ್​ ಕಡಾಡಿ, ಬೀಳಗಿ ಕ್ಷೇತ್ರ – ಜೆ.ಟಿ.ಪಾಟೀಲ್, ಧಾರವಾಡ – ವಿನಯ್ ಕುಲಕರ್ಣಿ, ಗುರುಮಿಠಕಲ್ ಕ್ಷೇತ್ರ – ಬಾಬುರಾವ್ ಚಿಂಚನಸೂರ್, ಕಿತ್ತೂರು ಕ್ಷೇತ್ರ-ಬಾಬಾಸಾಹೇಬ್​ ಬಿ.ಪಾಟೀಲ್​ ಅಭ್ಯರ್ಥಿಗಳಾಗಿದ್ದಾರೆ.



Post a Comment

أحدث أقدم