ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಪೂರ್ಣಗೊಂಡಿದ್ದು, ಇದರ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ. 11 ಸಮೀಕ್ಷೆಗಳ ಪೈಕಿ 8 ಸಮೀಕ್ಷೆಗಳು ಕಾಂಗ್ರೆಸ್ ಪರ ಹಾಗೂ 3 ಸಮೀಕ್ಷೆಗಳು ಬಿಜೆಪಿ ಪರ ಭವಿಷ್ಯ ನುಡಿದಿವೆ. ಅಂತಿಮವಾಗಿ ಶನಿವಾರ ಫಲಿತಾಂಶ ಹೊರಬೀಳಳಿದ್ದು, ಈ ವೇಳೆ ಯಾವ ಪಕ್ಷ 113ರ ಮಾಯಾ ಸಂಖ್ಯೆಯನ್ನು ದಾಟಲಿದೆ ಎಂಬ ಕುತೂಹಲ ಹೆಚ್ಚಾಗಿದೆ.
ಸಂಗ್ರಹ ಚಿತ್ರ
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಪೂರ್ಣಗೊಂಡಿದ್ದು, ಇದರ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ. 11 ಸಮೀಕ್ಷೆಗಳ ಪೈಕಿ 8 ಸಮೀಕ್ಷೆಗಳು ಕಾಂಗ್ರೆಸ್ ಪರ ಹಾಗೂ 3 ಸಮೀಕ್ಷೆಗಳು ಬಿಜೆಪಿ ಪರ ಭವಿಷ್ಯ ನುಡಿದಿವೆ. ಅಂತಿಮವಾಗಿ ಶನಿವಾರ ಫಲಿತಾಂಶ ಹೊರಬೀಳಳಿದ್ದು, ಈ ವೇಳೆ ಯಾವ ಪಕ್ಷ 113ರ ಮಾಯಾ ಸಂಖ್ಯೆಯನ್ನು ದಾಟಲಿದೆ ಎಂಬ ಕುತೂಹಲ ಹೆಚ್ಚಾಗಿದೆ.
ಈ ಬಾರಿ ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷಗಳೂ ಬಹುಮತ ಸಾಬೀತುಪಡಿಸಲು ಸಾಧ್ಯವಾಗದೇ ಹೋದಲ್ಲಿ ಜೆಡಿಎಸ್ ನಿರ್ಣಾಯಕ ಪಾತ್ರ ವಹಿಸಲಿದೆ. ಅತಂತ್ರ ವಿಧಾನಸಭೆ ಎದುರಾಗಿದ್ದೇ ಆದರೆ, ಜೆಡಿಎಸ್ ವಿಧಿಸುವ ಷರತ್ತುಗಳನ್ನು ಒಪ್ಪಿ ಮೈತ್ರಿ ಸರ್ಕಾರ ರಚಿಸುವ ಅನಿವಾರ್ಯತೆ ಕಾಂಗ್ರೆಸ್ ಹಾಗೂ ಬಿಜೆಪಿಗೆ ಎದುರಾಗಲಿದೆ.
ಮತದಾನ ಪೂರ್ಣಗೊಂಡ ಬೆನ್ನಲ್ಲೇ ಈಗಾಗಲೇ ಕುಮಾರಸ್ವಾಮಿಯವಸು ಸಿಂಗಾಪುರಕ್ಕೆ ತೆರಳಿದ್ದು, ಈಗಾಗಲೇ ಯಾರ ಜೊತೆಗೆ ಮೈತ್ರಿ ಮಾಡಿಕೊಳ್ಳಬೇಕೆಂಬುದರ ಕುರಿತು ಅಂತಿಮ ನಿರ್ಧಾರ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.
ಎನ್'ಡಿಟಿವಿ ನಡೆಸಿದ ಸಂದರ್ಶನದಲ್ಲಿ ಜೆಡಿಎಸ್ ನಾಯಕ ತನ್ವೀರ್ ಅಹ್ಮದ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆಂದು ತಿಳಿದುಬಂದಿದೆ.
ಈಗಾಗಲೇ ಯಾರೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಎಂಬುದರ ಕುರಿತು ಜೆಡಿಎಸ್ ನಿರ್ಧಾರ ಕೈಗೊಂಡಾಗಿದೆ. ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆಂದು ಹೇಳಿದ್ದಾರೆ.
ಕಾಂಗ್ರೆಸ್ ಮತ್ತು ಬಿಜೆಪಿ ಜೆಡಿಎಸ್ ಪಕ್ಷವನ್ನು ಸಂಪರ್ಕಿಸಿವೆ. ಚುನಾವಣಾ ಫಲಿತಾಂಶಕ್ಕಾಗಿ ಕಾಯುತ್ತಿದ್ದು, ಹೆಚ್ಚಿನ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಈಗಾಗಲೇ ನಾವು ನಿರ್ಧಾರ ತೆಗೆದುಕೊಂಡಿದ್ದೇವೆ. ಸೂಕ್ತ ಸಮಯದಲ್ಲಿ ಪಕ್ಷದ ಹಿರಿಯರು ತಮ್ಮ ನಿರ್ಧಾರವನ್ನು ಪ್ರಕಟಿಸುತ್ತಾರೆಂದು ತಿಳಿಸಿದ್ದಾರೆ.
ಯಾವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕರ್ನಾಟಕ ಮತ್ತು ಕನ್ನಡಿಗರ ಅಭ್ಯುದಯಕ್ಕಾಗಿ ದುಡಿಯಲು ಹೊರಟಿದ್ದೇವೆಂದು ಹೇಳಿದ್ದಾರೆ.
ನಮ್ಮ ಬೆಂಬಲವಿಲ್ಲದೆ ಯಾರೂ ಸರ್ಕಾರ ರಚಿಸಲು ಸಾಧ್ಯವಿಲ್ಲ. ಈ ಬಾರಿ ಉತ್ತಮ ಸ್ಥಾನಗಳಲ್ಲಿ ಪಕ್ಷ ಗೆಲುವು ಸಾಧಿಸಲಿದೆ. ಹಣದ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳೊಂದಿಗೆ ಹೊಂದಾಣಿಕೆ ಸಾಧ್ಯವಿಲ್ಲ. ಆದರೆ, ಸರ್ಕಾರದ ಭಾಗವಾಗುವ ಶಕ್ತಿ ನಮಗಿದೆ ಎಂದಿದ್ದಾರೆ.
ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆಯವರು, ಸಮ್ಮಿಶ್ರ ಸರ್ಕಾರದ ಪ್ರಶ್ನೆಯೇ ಬರುವುದಿಲ್ಲ. ಬಿಜೆಪಿ ಜೆಡಿಎಸ್ ನ್ನು ಸಂಪರ್ಕಿಸಿಲ್ಲ, ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಹೇಳಿದ್ದರು.
Post a Comment