ಶಿವಮೊಗ್ಗ: ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ, ಹಲವು ಮಂದಿ ದುರ್ಮರಣ

 ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಹಲವು ಮಂದಿ ದುರ್ಮರಣ ಹೊಂದಿರುವ ಘಟನೆ ಶಿವಮೊಗ್ಗದ ಬಳಿ ಗುರುವಾರ ಸಂಜೆ ನಡೆದಿದೆ.

                                                                    ಸಾಂದರ್ಭಿಕ ಚಿತ್ರ

Posted By :Rekha.M
Source : Online Desk

ಶಿವಮೊಗ್ಗ: ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಹಲವು ಮಂದಿ ದುರ್ಮರಣ ಹೊಂದಿರುವ ಘಟನೆ ಶಿವಮೊಗ್ಗದ ಬಳಿ ಗುರುವಾರ ಸಂಜೆ ನಡೆದಿದೆ.

ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಚೋರಡಿ ಬಳಿ ಈ ಅಪಘಾತ ಸಂಭವಿಸಿದ್ದು, 4ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಮೃತರ ಸಂಖ್ಯೆ ನಿರ್ದಿಷ್ಟವಾಗಿ ತಿಳಿದುಬಂದಿಲ್ಲ.

ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಹಾಗೂ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಎರಡು ಖಾಸಗಿ ಬಸ್ ಗಳ ನಡುವೆ ಚೋರಡಿ ಬಳಿಯ ಕುಮದ್ವತಿ ಸೇತುವೆ ಮೇಲೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಗಾಯಾಳುಗಳ ರಕ್ಷಣೆ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.


Post a Comment

Previous Post Next Post