ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರು ಯುವಕರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ಕೋಮುದ್ವೇಷಕ್ಕೆ ಬಲಿಯಾದರು
ಬೆಂಗಳೂರು: ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರು ಯುವಕರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ಮಂಗಳೂರಿನಲ್ಲಿ 2018ರ ಜನವರಿ 3ರಂದು ಕಾಟಿಪಳ್ಳದ ದೀಪಕ್ ರಾವ್, ಕಳೆದ ವರ್ಷದ ಜುಲೈ 19ರಂದು ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಕಳೆದ ವರ್ಷದ ಡಿಸೆಂಬರ್ 24ರಂದು ಕಾಟಿಪಳ್ಳದ ಅಬ್ದುಲ್ ಜಲೀಲ್ ರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು.
ಈ ಕೊಲೆಗಳು ಮತೀಯ ಕಾರಣಗಳಿಂದಾಗಿ ಆಗಿದ್ದರಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ಘೋಷಿಸಲಾಗಿದೆ.
ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕರು ಸರ್ಕಾರದ ವತಿಯಿಂದ ಕೋಮುದ್ವೇಷಕ್ಕೆ ಬಲಿಯಾದ ಕುಟುಂಬಕ್ಕೆ ಪರಿಹಾರ ಧನ ಮಂಜೂರು ಮಾಡುವಂತೆ ಒಳಾಡಳಿತ ಇಲಾಖೆಯನ್ನು ಕೋರಿದ ಮೇರೆಗೆ ಈ ಪರಿಹಾರ ಘೋಷಿಸಲಾಗಿದ್ದು, ಜೂನ್ 19ರಂದು ಪರಿಹಾರದ ಧನದ ಚೆಕ್ ಪಡೆಯುವಂತೆ ಸೂಚಿಸಲಾಗಿದೆ.
إرسال تعليق