ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಮೂವರಿಗೆ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ (ಡಿ.ಲಿಟ್) ನೀಡಲಾಗುತ್ತಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮುSource : Online Desk
ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಮೂವರಿಗೆ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ (ಡಿ.ಲಿಟ್) ನೀಡಲಾಗುತ್ತಿದೆ.
ಸುದ್ದಿಗೋಷ್ಠಿಯಲ್ಲಿಂದು ಈ ಕುರಿತು ಮಾಹಿತಿ ನೀಡಿದ ಕುಲಪತಿ ಪ್ರೊಫೆಸರ್ ಶರಣಪ್ಪ ಹಲಸೆ, ಜುಲೈ 2 ರಂದು ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು, ಈ ವಿಷಯವನ್ನು ರಾಷ್ಟ್ರಪತಿ ಅವರಿಗೆ ತಿಳಿಸಲಾಗಿದೆ. ಒಂದು ವೇಳೆ ಆ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಬಾರದಿದ್ದರೆ ಜುಲೈ 3 ರಂದು ಅವರು ರಾಜ್ಯ ಪ್ರವಾಸ ಕೈಗೊಳ್ಳಲಿರುವ ವೇಳೆ ಬೆಂಗಳೂರಿನ ರಾಜಭವನದಲ್ಲಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಘಟಿಕೋತ್ಸವದಲ್ಲಿ 1 ಪಿಹೆಚ್ ಡಿ, 44 ಚಿನ್ನದ ಪದಕ , 27 ನಗದು ಬಹುಮಾನ ನೀಡಲಾಗುವುದು, ಒಟ್ಟು 8,722 ಅಭ್ಯರ್ಥಿಗಳು ವಿವಿಧ ಪದವಿ ಪಡೆಯಲು ಅರ್ಹರಾಗಿದ್ದಾರೆ ಎಂದು ಅವರು ವಿವರಿಸಿದರು.
إرسال تعليق