ಸರ್ವರ್ ಸಮಸ್ಯೆಯನ್ನು ಸರಿಪಡಿಸಿ ಶೀಘ್ರದಲ್ಲೇ 'ಗೃಹಲಕ್ಷ್ಮಿ' ಯೋಜನೆಗೆ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗುರುವಾರ ಹೇಳಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ಬೆಳಗಾವಿ: ಸರ್ವರ್ ಸಮಸ್ಯೆಯನ್ನು ಸರಿಪಡಿಸಿ ಶೀಘ್ರದಲ್ಲೇ 'ಗೃಹಲಕ್ಷ್ಮಿ' ಯೋಜನೆಗೆ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗುರುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವರ್ ಸಮಸ್ಯೆ ಹಿನ್ನಲೆಯಲ್ಲಿ ನಮ್ಮ ಸರಕಾರದ ಪ್ರಮುಖ ಗ್ಯಾರಂಟಿ ಗಳಲ್ಲಿ ಒಂದಾದ ‘ಗೃಹ ಜ್ಯೋತಿ’ ಯೋಜನೆ ನೋಂದಣಿ ವಿಳಂಬವಾಗುತ್ತಿದೆ. ಸರ್ವರ್ ಗುಣಮಟ್ಟ ಹೆಚ್ಚಿಸಿ ಶೀಘ್ರದಲ್ಲೇ ನೋಂದಣಿ ಕಾರ್ಯ ಆರಂಭಿಸಲಾಗುವುದು ಎಂದು ಹೇಳಿದರು.
ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಸರಕಾರಕ್ಕೆ ಕಣ್ಣು ಕಿವಿ ಹಾಗೂ ಹೃದಯವಂತೂ ಇಲ್ಲ. ಇದು ‘ಕೇಂದ್ರಕ್ಕೆ ಬಿಸಿ ಮುಟ್ಟುತ್ತದೆಯೋ, ಇಲ್ಲವೋ ಆಮೇಲೆ ನೋಡೋಣ. ಮೊದಲು 25 ಮಂದಿ ಸಂಸದರು ಕಣ್ಣು ತೆಗೆಯಲಿ ಎಂದು ಎಂದು ತಿಳಿಸಿದರು.
ಒಂದು ವರ್ಷದಲ್ಲಿ ಲೋಕಸಭಾ ಚುನಾವಣೆ ಬರಲಿದೆ. ರಾಜ್ಯದ ಮಹಾಜನತೆ ಅರ್ಥ ಮಾಡಿಕೊಳ್ಳಲಿ. ಚುನಾವಣೆ ಬಂದಾಗ ಜನರ ಓಲೈಕೆಗೆ ಬರುತ್ತಾರೆ. ಆದರೆ, ಇವತ್ತು ಬಡವರಿಗೆ ನೀಡಬೇಕಾದ ಅಕ್ಕಿಯನ್ನು ಒದಗಿಸಲು ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಕಿಡಿಕಾರಿದರು.
Post a Comment