ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ 5 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ನೀಡುವುದಾಗಿ ಘೋಷಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ 5 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ನೀಡುವುದಾಗಿ ಘೋಷಿಸಿದ್ದಾರೆ.
ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಅವರಿಗೆ ಸ್ವಯಂ ಉದ್ಯೋಗಕ್ಕಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ 5 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ಒದಗಿಸಲು 2 ಕೋಟಿ ರೂ. ಅನುದಾನ ಮತ್ತು ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ವಿಧಾನಸಭೆಯಲ್ಲಿ 2023-24ನೇ ಸಾಲಿನ ಆಯವ್ಯಯ ಮಂಡಿಸಿದ ಹಣಕಾಸು ಖಾತೆಯನ್ನು ಹೊಂದಿರುವ ಸಿದ್ದರಾಮಯ್ಯ ಅವರು, ಪ್ರಸಕ್ತ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 70,427 ಕೋಟಿ ರೂ., ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2023-24 ನೇ ಸಾಲಿನಲ್ಲಿ 51,229 ಕೋಟಿ ರೂ. ಅನುದಾನ ಒದಗಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ನಮ್ಮ ರಾಜ್ಯದ ಮಹಿಳೆಯರಿಗೆ ಬದುಕಿನ ನಿರ್ವಹಣೆಯನ್ನು ಇನ್ನಷ್ಟು ಸುಗಮಗೊಳಿಸಲು ಮತ್ತು ಆರ್ಥಿಕ ಭದ್ರತೆ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಸಿಎಂ ಹೇಳಿದ್ದಾರೆ.
إرسال تعليق