ಯತ್ರೀಂದ್ರ ಸಿದ್ದರಾಮಯ್ಯ ಅವರ ವ್ಯಂಗ್ಯಚಿತ್ರವೊಂದನ್ನು ಟ್ವೀಟ್ ಮಾಡಿರುವ ಬಿಜೆಪಿ, ಹುದ್ದೆಗಳು ಮಾರಾಟಕ್ಕಿವೆ. ನೇರವಾಗಿ ಸ್ಯಾಡೋ ಸಿಎಂ ಸಂಪರ್ಕಿಸಬಹುದು ಎಂದು ಹೇಳಿದೆ.
ಬಿಜೆಪಿ ಫೋಸ್ಟ್ ಮಾಡಿರುವ ವ್ಯಂಗ್ಯ ಚಿತ್ರ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ಧಂದೆ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಆರೋಪಿಸುತ್ತಿವೆ. ಇಂಧನ, ಗೃಹ, ಲೋಕೋಪಯೋಗಿ, ಬಿಬಿಎಂಪಿ ಸೇರಿದಂತೆ ಆಯಾಕಟ್ಟಿನ ಜಾಗಗಳಲ್ಲಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುತ್ತಿದ್ದು, ಕಾಸಿಗಾಗಿ ತಮ್ಮವರನ್ನು ನಿಯೋಜಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ವಿರುದ್ಧ ಹರಿಹಾಯುತ್ತಿವೆ.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ದೊಡ್ಡ ಪ್ರಮಾಣದ ವರ್ಗಾವಣೆ ದಂಧೆಯಲ್ಲಿ ತೊಡಗಿ ಲೂಟಿ ಮಾಡುತ್ತಿದೆ. ಮುಖ್ಯಮಂತ್ರಿ ಕಚೇರಿಯಲ್ಲಿ ಅಧಿಕಾರಿಗಳು ವರ್ಗಾವಣೆಗೆ ಹಣ ಕೇಳುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿರುವ ಕುಮಾರಸ್ವಾಮಿ, ರಾಜ್ಯ ಸರ್ಕಾರದ ಭ್ರಷ್ಟಾಚಾರದ ಪುರಾವೆ ಇರುವ ಪೆನ್ ಡ್ರೈವ್ ನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
ಅದರಲ್ಲೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಅವರ ಪುತ್ರ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ 'ಕಿಚನ್ ಕ್ಯಾಬಿನೆಟ್' ಮುಖ್ಯಮಂತ್ರಿ ಕಾರ್ಯಾಲಯ ಹಾಗೂ ವರ್ಗಾವಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂಬಂತಹ ಆರೋಪಗಳು ಕೇಳಿಬರುತ್ತಿವೆ.
ಈ ಸಂಬಂಧ ಇಂದು ಯತ್ರೀಂದ್ರ ಸಿದ್ದರಾಮಯ್ಯ ಅವರ ವ್ಯಂಗ್ಯಚಿತ್ರವೊಂದನ್ನು ಟ್ವೀಟ್ ಮಾಡಿರುವ ಬಿಜೆಪಿ, ಹುದ್ದೆಗಳು ಮಾರಾಟಕ್ಕಿವೆ. ನೇರವಾಗಿ ಸ್ಯಾಡೋ ಸಿಎಂ ಸಂಪರ್ಕಿಸಬಹುದು ಎಂದು ಹೇಳಿದೆ.
Post a Comment