ಮೇಕೆದಾಟು ನಿರ್ಮಾಣಕ್ಕೆ ಅನುಮೋದನೆ ನೀಡಲು ವಿಳಂಬ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿರುವ ಸಿಎಂ ಸಿದ್ದರಾಮಯ್ಯ ಅವರು, ಕಾವೇರಿ ನದಿಯ ಹಂಚಿಕೆ ವಿಚಾರದಲ್ಲಿ ನೆರೆಯ ತಮಿಳುನಾಡು 'ಅನಗತ್ಯ ತೊಂದರೆ' ಉಂಟುಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ
ಮೈಸೂರು: ಮೇಕೆದಾಟು ನಿರ್ಮಾಣಕ್ಕೆ ಅನುಮೋದನೆ ನೀಡಲು ವಿಳಂಬ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿರುವ ಸಿಎಂ ಸಿದ್ದರಾಮಯ್ಯ ಅವರು, ಕಾವೇರಿ ನದಿಯ ಹಂಚಿಕೆ ವಿಚಾರದಲ್ಲಿ ನೆರೆಯ ತಮಿಳುನಾಡು 'ಅನಗತ್ಯ ತೊಂದರೆ' ಉಂಟುಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಕರ್ನಾಟಕ ಒತ್ತಾಯಿಸುತ್ತಿದೆ. ಇನ್ನು ಮಳೆಯ ಸಂಕಷ್ಟದ ಸಮಯದಲ್ಲಿ ಉಭಯ ರಾಜ್ಯಗಳ ನಡುವಿನ ಕಾವೇರಿ ಜಲ ವಿವಾದಕ್ಕೆ ಇದೊಂದೇ ಪರಿಹಾರ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
'ಮೇಕೆದಾಟು ಯೋಜನೆಗೆ ಕೇಂದ್ರದ ಬಿಜೆಪಿ ಸರ್ಕಾರ ಅನುಮತಿ ನೀಡಿಲ್ಲ. ತಮಿಳುನಾಡು ಈ ಯೋಜನೆಯನ್ನು ವಿರೋಧಿಸಲು ಯಾವುದೇ ಕಾರಣಗಳಿಲ್ಲ. ಯಾಕೆಂದರೆ ಇದು ನಮ್ಮ ಪ್ರಾಂತ್ಯದಲ್ಲಿದೆ. ತಮಿಳುನಾಡಿಗೆ 25 ಟಿಎಂಸಿ ನೀರು ಹಂಚಿಕೆ ಮಾಡಲಾಗಿದ್ದು, ಸಾಮಾನ್ಯ ವರ್ಷಗಳಲ್ಲಿ ಅಷ್ಟು ನೀರು ಬಿಡಬೇಕು. ಸಂಕಷ್ಟದ ಸಮಯದಲ್ಲಿ ಸಂಕಷ್ಟ ಸೂತ್ರವನ್ನು ಅನುಸರಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಅನಗತ್ಯವಾಗಿ ಅವಾಂತರ ಸೃಷ್ಟಿಸುತ್ತಿದೆ ಎಂದು ಆರೋಪಿಸಿದ ಅವರು, ಕರ್ನಾಟಕ ಡಿಪಿಆರ್(ವಿವರವಾದ ಯೋಜನಾ ವರದಿ) ಸಲ್ಲಿಸಿದ್ದರೂ ಅನುಮತಿ ನೀಡುತ್ತಿಲ್ಲ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಅನುಮತಿ ನೀಡಲು ಕೇಂದ್ರ ಸರ್ಕಾರ ಸೂಚಿಸಬೇಕು. ಅದು ಭಾರತ ಸರ್ಕಾರದ ಅಡಿಯಲ್ಲಿ ಬರುತ್ತದೆ. ಆದರೆ ಕೇಂದ್ರ ಅದನ್ನು ಮಾಡುತ್ತಿಲ್ಲ ಎಂದು ಅವರು ಸರ್ವಪಕ್ಷ ಸಭೆಯಲ್ಲಿ ಬಿಜೆಪಿ ರಾಜ್ಯ ನಾಯಕರು ಹೇಳಿದರು. ಈ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ. ಆದರೆ ಅವರು ಇಲ್ಲಿಗೆ ಬಂದು ರಾಜಕೀಯ ಮಾಡುತ್ತಾರೆ ಎಂದರು.
ರಾಜ್ಯದಲ್ಲಿನ ನದಿ ಜಲಾನಯನ ಪ್ರದೇಶಗಳಲ್ಲಿ ಅಭಾವದ ಮಳೆಯಿಂದಾಗಿ ನೀರಿನ ಕೊರತೆಯ ಭೀತಿಯನ್ನು ಎದುರಿಸುತ್ತಿದ್ದರೂ, ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುತ್ತಿದೆ ಎಂದು ರಾಜ್ಯ ಬಿಜೆಪಿ ಟೀಕಿಸಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ತಮಿಳುನಾಡಿಗೆ ನೀರು ಬಿಡುತ್ತಿರುವುದು ಸಂತಸದಿಂದಲ್ಲ, ಆದರೆ ಸಿಡಬ್ಲ್ಯುಎಂಎ ಆದೇಶದಿಂದಾಗಿ ಎಂದು ಸಿದ್ದರಾಮಯ್ಯ ಬೆಟ್ಟು ಮಾಡಿದರು. ರಾಜ್ಯದ ರೈತರ ಹಿತಾಸಕ್ತಿ ಮತ್ತು ಮೈಸೂರು, ಬೆಂಗಳೂರು ಮತ್ತು ಇತರ ಹಲವಾರು ಜಿಲ್ಲೆಗಳ ಕುಡಿಯುವ ನೀರಿನ ಅಗತ್ಯಗಳನ್ನು ರಕ್ಷಿಸಲು ಸರ್ಕಾರವು ಕರ್ತವ್ಯ ಬದ್ಧವಾಗಿದೆ ಎಂದು ಹೇಳಿದರು.
'ಜಲ ನೀತಿಯಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗಿದ್ದು, ಬೆಳೆಗಳನ್ನು ರಕ್ಷಿಸಬೇಕು. ನೀರು ಬಿಡುವಂತೆ ಪ್ರಾಧಿಕಾರ ಹೇಳಿದ್ದರಿಂದ ನೀರು ಬಿಟ್ಟಿದ್ದೇವೆ. ತಮಿಳುನಾಡು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ, ಆದರೆ ನ್ಯಾಯಾಲಯ ಇಲ್ಲಿಯವರೆಗೂ ಯಾವುದೇ ಆದೇಶಗಳನ್ನು ನೀಡಿಲ್ಲ. ಸೆಪ್ಟೆಂಬರ್ 21ರಂದು ಸುಪ್ರೀಂ ಕೋರ್ಟ್‌ನ ಮುಂದೆ ಪ್ರಕರಣವು ಬರಲಿದ್ದು, ಅಲ್ಲಿ ರಾಜ್ಯವು ವಾಸ್ತವಿಕ ವಿಷಯವನ್ನು ತಿಳಿಸಲಿದೆ. ಇನ್ನು ಸೆಪ್ಟೆಂಬರ್ 12ರಂದು ರಾಜ್ಯವು CWMA ಮುಂದೆ ತನ್ನ ನಿಲುವನ್ನು ಮುಂದಿಡಲಿದೆ. ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ, ರಾಜ್ಯ ಮತ್ತು ಅದರ ರೈತರ ಹಿತಾಸಕ್ತಿಯಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸಿಎಂ ಹೇಳಿದರು.
ಬೆಳೆಗಳಿಗೆ ಪ್ರತಿದಿನ 24,000 ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಇತ್ತೀಚೆಗೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿತ್ತು. ಮುಂಗಾರು ಮಳೆಯ ಕೊರತೆಯನ್ನು ಉಲ್ಲೇಖಿಸಿ, ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಕುಡಿಯುವ ನೀರು ಮತ್ತು ಬೆಳೆದು ನಿಂತಿರುವ ಬೆಳೆಗಳಂತಹ ತನ್ನ ಅಗತ್ಯಗಳನ್ನು ಗಣನೆಗೆ ತೆಗೆದುಕೊಂಡ ನಂತರವೇ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ಹೇಳುತ್ತಿದೆ.
ಆಗಸ್ಟ್ ಅಂತ್ಯದವರೆಗೆ ತಮಿಳುನಾಡಿಗೆ 86 ಟಿಎಂಸಿ ನೀರು ಬಿಡಬೇಕು. ಆದರೆ 'ನಾವು ಅದರಲ್ಲಿ ಅರ್ಧದಷ್ಟು ನೀರನ್ನು ಸಹ ಬಿಡುಗಡೆ ಮಾಡಿಲ್ಲ' ಎಂದು ಹೇಳಿದ ಅವರು ನೀರು ಬಿಡುವ ಬಗ್ಗೆ ಬಿಜೆಪಿ ಟೀಕೆಗಳಿಗೆ ತಿರುಗೇಟು ನೀಡಿದರು. ಬಿಜೆಪಿ 25 ಸಂಸದರನ್ನು ಹೊಂದಿದೆ. ಅವರು ಯಾವಾಗ ರಾಜ್ಯದ ಪರವಾಗಿ ಸಂಸತ್ತಿನಲ್ಲಿ ಧರಣಿ ನಡೆಸಿದ್ದಾರೆ?" ಎಂದು ಪ್ರಶ್ನಿಸಿದ ಅವರು, ಸರ್ವಪಕ್ಷ ನಿಯೋಗದ ನೇತೃತ್ವ ವಹಿಸುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿ ಕೇಂದ್ರಕ್ಕೆ ಬರೆದ ಪತ್ರಕ್ಕೆ ಪ್ರಧಾನಿಯಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. 'ರಾಜ್ಯ ಬಿಜೆಪಿ ನಾಯಕರಿಗೆ ಸಮಯಾವಕಾಶ ಸಿಗಲಿ, ಪ್ರಧಾನಿ ಜತೆ ಮಾತನಾಡಲಿ ಎಂದು ಹೇಳಿದರು.
إرسال تعليق